ಬರ ಪರಿಹಾರವನ್ನು ಪ್ರಾಮಾಣಿಕವಾಗಿ ರೈತರಿಗೆ ತಲುಪಿಸುವ ಕೆಲಸ ಸರ್ಕಾರ ಮಾಡಲಿ: ಸಿ.ಟಿ.ರವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸರಕಾರದಿಂದ ಬಿಡುಗಡೆಯಾಗಿರುವ ಹಣವನ್ನು ರಾಜ್ಯ ಸರಕಾರ ಪ್ರಾಮಾಣಿಕವಾಗಿ ರೈತರಿಗೆ ಹಸ್ತಾಂತರಿಸಬೇಕು ಎಂದು ಮಾಜಿ ಸಚಿವ ಸಿ.ಟಿ. ರವಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರನ್ನು ಬೆಂಬಲಿಸಲು ಆಸಕ್ತಿ ಹೊಂದಿಲ್ಲ. ರೈತರ ವಿಷಯದಲ್ಲಿ ರಾಜಕಾರಣ ಮಾಡುವುದರಲ್ಲಿ ಹೆಚ್ಚು ಆಸಕ್ತಿ ತೋರಿಸುತ್ತಿದೆ. ಕೇಂದ್ರ ಸರ್ಕಾರ ನೀಡುವ ಅನುದಾನವಾದರೂ ರೈತರಿಗೆ ಸದುದ್ದೇಶದಿಂದ ತಲುಪಬೇಕು ಎಂದರು.

ರಾಜ್ಯದಲ್ಲಿ 600ಕ್ಕೂ ಹೆಚ್ಚು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಸಾಮಾನ್ಯ ಸಂಗತಿ ಅಲ್ವೇ ಅಲ್ಲ. ರೈತರು ಹತಾಶೆ ಮತ್ತು ಸಂಕಷ್ಟಕ್ಕೊಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ. ಕೂಡಲೇ ಸರಕಾರ ರೈತರ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ಆಗ್ರಹಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!