ರಾಮಾನುಜಾಚಾರ್ಯರ ಜ್ಞಾನ ಇಡೀ ವಿಶ್ವಕ್ಕೇ ವ್ಯಾಪಿಸಲಿ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಹೈದರಾಬಾದ್ ‌ ನಲ್ಲಿ 216 ಅಡಿ ಎತ್ತರದ ಭಕ್ತಿ ಸಂತ ಶ್ರೀ ರಾಮಾನುಜಾಚಾರ್ಯರ ಸಮಾನತೆಯ ಪ್ರತಿಮೆಯನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ರಾಮಾನುಜಾಚಾರ್ಯರ ಜ್ಞಾನ ಇಡೀ ವಿಶ್ವಕ್ಕೇ ವ್ಯಾಪಿಸಲಿ ಎಂದರು.

ರಾಮಾನುಜಾಚಾರ್ಯರಪ್ರತಿಮೆ ಭಾರತದ ಪ್ರಾಚೀನ ಸಂಸ್ಕೃತಿಯನ್ನು ಮತ್ತೊಮ್ಮೆ ಬಲಪಡಿಸುತ್ತದೆ. ಈ ಪ್ರತಿಮೆ ಮುಂದಿನ ಪೀಳಿಗೆಗೆ ಪ್ರೇರಣೆ ನೀಡುವುದರ ಜೊತೆಗೆ ಭಾರತದ ಪುರಾತನ ಸಂಸ್ಕೃತಿ ಬಿಂಬಿಸುತ್ತದೆ ಎಂದರು.

ರಾಮಾನುಜಾಚಾರ್ಯರ ಬೋಧನೆಗಳು ಸಮಾಜಕ್ಕೆ ದಾರಿದೀಪ. ಡಾ.ಬಿ.ಆರ್.ಅಂಬೇಡ್ಕರ್ ಕೂಡ ರಾಮಾನುಜರನ್ನು ಪ್ರಶಂಸಿಸುತ್ತಿದ್ದರು. ಎಲ್ಲರಿಗೂ ಸಾಮಾಜಿಕ ನ್ಯಾಯ ಸಿಗಬೇಕೆಂದು ಪ್ರತಿಪಾದಿಸಿದ್ದರು. ಕನಕದಾಸರು ಕನ್ನಡದಲ್ಲಿ ರಾಮಾನುಜರನ್ನು ಪ್ರಶಂಸಿಸಿದ್ದಾರೆ ಎಂದು ಮೋದಿ ಹೇಳಿದರು.

ಚಿನ್ನ, ಬೆಳ್ಳಿ, ತಾಮ್ರ, ಹಿತ್ತಾಳೆ ಮತ್ತು ಸತುವು ಎಂಬ ಐದು ಲೋಹಗಳ ಸಂಯೋಜನೆಯಾದ `ಪಂಚಲೋಹದಿಂದ ಈ ಪ್ರತಿಮೆಯನ್ನು ನಿರ್ಮಿಸಲಾಗಿದೆ ಮತ್ತು ಇದು ವಿಶ್ವದ ಅತ್ಯಂತ ಎತ್ತರದ ಲೋಹದ ಪ್ರತಿಮೆಗಳಲ್ಲಿ ಒಂದಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!