ಹೊಸದಿಗಂತ ಆನ್ ಲೈನ್ ಡೆಸ್ಕ್:
ಪ್ರಧಾನಿ ನರೇಂದ್ರ ಮೋದಿ ದೇಶದ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಷಯಗಳನ್ನು ತಿಳಿಸಿದ್ದು, ಕನ್ನಡಿಗರಿಗೆ ಕನ್ನಡದಲ್ಲೇ ಶುಭಕೋರಿದ್ದಾರೆ.
ಈ ಕುರಿತು ಕನ್ನಡದಲ್ಲಿ ಟ್ವೀಟ್ ಮಾಡಿರುವ ಅವರು, ನಿಮ್ಮೆಲ್ಲರಿಗೂ ಯುಗಾದಿಯ ಶುಭಕಾಮನೆಗಳು. ಮುಂಬರುವ ವರ್ಷ ಅದ್ಭುತವಾಗಲಿ. ನೀವೆಲ್ಲರೂ ಆರೋಗ್ಯ ಹಾಗೂ ಸಂತಸದಿಂದಿರಿ. ಎಲ್ಲೆಡೆ ಸಮೃದ್ಧಿ ಹಾಗು ಸಂತೋಷ ಪಸರಿಸಲಿ ಎಂದು ಶುಭ ಹಾರೈಸಿದ್ದಾರೆ.
ದೇಶಾದ್ಯಂತ ಇಂದು ಯುಗಾದಿ ಹಬ್ಬವನ್ನು ಸಂತಸ, ಸಡಗರದಿಂದ ಆಚರಿಸಲಾಗುತ್ತದೆ. ಕರ್ನಾಟಕದಲ್ಲಿ ಯುಗಾದಿ, ಮಹಾರಾಷ್ಟ್ರದಲ್ಲಿ ಗುಢಿಪಾಡವಾ, ಆಂಧ್ರಪ್ರದೇಶ ಹಾಗೂ ತಮಿಳು ನಾಡಿನಲ್ಲಿ ಹೊಸ ವರ್ಷ, ಉತ್ತರ ಭಾರತದಲ್ಲಿ ಬೈಸಾಖಿ ಎಂದು ಕರೆಯಲಾಗುತ್ತದೆ.