ಜಾತಿ ಗಣತಿ ವರದಿ ಕುರಿತು ಬಹಿರಂಗ ಚರ್ಚೆ ಆಗಲಿ : ಬೊಮ್ಮಾಯಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಿನ್ನೆಯಷ್ಟೇ ಬಹುನಿರೀಕ್ಷಿತ ಜಾತಿಗಣತಿ ವರದಿ ಸಿಎಂ ಸಿದ್ದರಾಮಯ್ಯ ಕೈ ಸೇರಿದೆ. ಈ ಜಾತಿ ಗಣತಿ ವರದಿ ಬಗ್ಗೆ ಸಾರ್ವಜನಿಕ ಚರ್ಚೆ ಆಗಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಈಗ ಬಂದಿರುವ ಜಾತಿ ಗಣತಿ ವರದಿ ಕಾಂತರಾಜ್ ಆಯೋಗದ ವರದಿಯೋ ಅಥವಾ ಜಯಪ್ರಕಾಶ್ ಹೆಗ್ಡೆ ಆಯೋಗದ ವರದಿಯೋ ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದಿದ್ದಾರೆ.

ಇದರ ಬಗ್ಗೆ ಬಹಿರಂಗವಾಗಿ ಸ್ಪಷ್ಟನೆ ನೀಡಬೇಕು, ವರದಿಯನ್ನು ಬಳಸಿ ಮುಂಬರುವ ಚುನಾವಣೆಯಲ್ಲಿ ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!