Tuesday, March 28, 2023

Latest Posts

ಶಿಕ್ಷಣ ಕ್ಷೇತ್ರದಲ್ಲಿ ಅಮುಲಾಗ್ರ ಬದಲಾವಣೆಗೆ ನಾವೆಲ್ಲರೂ ಪ್ರಯತ್ನಿಸೋಣ: ಸಚಿವ ನಾಗೇಶ್

ಹೊಸದಿಗಂತ ವರದಿ,ಕಾರವಾರ:

ಶಿಕ್ಷಣ ಕ್ಷೇತ್ರದಲ್ಲಿ ಅಮುಲಾಗ್ರ ಬದಲಾವಣೆ ತರಲು ನಾವೆಲ್ಲರೂ ಪ್ರಯತ್ನಿಸೋಣ ಎಂದು ಪ್ರಾಥಮಿಕ ಹಾಗೂ ಪ್ರೌಡ ಶಿಕ್ಷಣ ಮತ್ತು ಸಕಾಲ ಸಚಿವ ಬಿ.ಸಿ. ನಾಗೇಶ್ ಹೇಳಿದರು.

ನಗರದ ಮಾಲಾದೇವಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಗುರುಭವನ, ಶಾಸಕರ ಮಾದರಿ ಶಾಲೆ, ಸರ್ಕಾರಿ ಮಹಿಳಾ ಕಾಲೇಜು, ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯ, ವಿವಿಧ ಗ್ರಾಮ ಪಂಚಾಯತಗಳಲ್ಲಿ ೧೧ ಶಾಲಾ ಕಟ್ಟಡ ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣ ಕಾಮಗಾರಿಗಳ ಶಂಕು ಸ್ಥಾಪನೆ ನೆರೆವೇರಿಸಿ ಮಾತನಾಡಿದರು.

ವಿಧಾನ ಪರಿಷತ್ ಸದಸ್ಯ ಸಂಕ್ಕನೂರು ಮಾತನಾಡಿ, ದೇಶದ ಭದ್ರತೆ, ಅಭಿವೃದ್ಧಿಗೆ ಶಿಕ್ಷಣವು ಮಹತ್ತರ ಪಾತ್ರವನ್ನು ನಿರ್ವಹಿಸುತ್ತದೆ ಎಂದರು.

ಶಾಸಕಿ ರೂಪಾಲಿ ನಾಯ್ಕ ಮಾತನಾಡಿ, ಈಗಾಗಲೇ ಗುರುಭವನ ನಿರ್ಮಾಣಕ್ಕೆ ಕ್ರಮ ವಹಿಸಿದ್ದು, ಶಿಕ್ಷಕರು ತಮ್ಮ ಕಾರ್ಯಕ್ರಮಗಳನ್ನು ನಡೆಸಿಕೊಂಡು ಹೋಗಲು ಇದು ಅನುಕೂಲವಾಗಲಿದೆ ಎಂದರು.

ನಗರಸಭೆ ಅಧ್ಯಕ್ಷ ನಿತೀನ್ ಪಿಕಳೆ, ನಗರ ಸಭೆ ಉಪಾಧ್ಯಕ್ಷ ಪಿ.ಪಿ. ನಾಯ್ಕ, ಉಪ ವಿಭಾಗಕಾರಿ ಜಯಲಕ್ಷ್ಮಿ ರಾಯಕೋಡ್, Pಖಿ ಡಿಡಿಪಿಐ ಹಣಮಂತಪ್ಪ ನಿಟ್ಟೂರು, ಅಉಉ ರಾಮಚಂದ್ರ ಗಂವ್ಕಾರ್ ಇನ್ನಿತರರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!