ತಾಳ್ಮೆ, ಶಾಂತಿಯಿಂದಿರೋಣ: ನಟ ದರ್ಶನ್‌ ಫ್ಯಾನ್ಸ್‌ಗೆ ಸಂದೇಶ ಕೊಟ್ಟ ವಿಜಯಲಕ್ಷ್ಮೀ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಇತ್ತ ಜೈಲಿನಲ್ಲಿರುವ ಪತಿಯನ್ನು ಪತ್ನಿ ವಿಜಯಲಕ್ಷ್ಮೀ ಭೇಟಿಯಾಗಿ ಬಂದಿದ್ದಾರೆ.

ಇದರ ಬೆನ್ನಲ್ಲೇ ವಿಜಯಲಕ್ಷ್ಮೀ ನಟನ ಅಭಿಮಾನಿಗಳಿಗೆ ದೊಡ್ಡ ಸಂದೇಶವೊಂದನ್ನು ರವಾನಿಸಿದ್ದಾರೆ.

‘ಅಭಿಮಾನಿಗಳು ಶಾಂತಿಯಿಂದ ಇರಬೇಕು’ ಎಂಬುದಾಗಿ ಅವರು ಪೋಸ್ಟ್‌ ಮೂಲಕ ಮನವಿ ಮಾಡಿದ್ದಾರೆ.

‘ನನ್ನ ಪ್ರೀತಿಯ ಸಹೋದರರೇ, ದರ್ಶನ್ ಅವರಿಗೆ ನೀವು, ತಮ್ಮ ಅಭಿಮಾನಿಗಳು ಎಂದರೆ ಅಪಾರವಾದ ಪ್ರೀತಿ. ನೀವು ಅವರನ್ನು ಪ್ರೀತಿಸುವಷ್ಟೇ ಅವರು ತಮ್ಮ “ಸೆಲೆಬ್ರಿಟಿಗಳನ್ನು” ತನ್ನ ಹೃದಯದಲ್ಲೇ ಹೊತ್ತಿರುವುದು ನಿಮಗೇ ಗೊತ್ತಿದೆ. ಇದೊಂದು ಪರೀಕ್ಷೆಯ ಸಮಯ. ನನಗೆ, ನಿಮಗೆ, ನಮ್ಮೆಲ್ಲರಿಗೆ. ನಾವು ತಾಳ್ಮೆ ಕಳೆದುಕೊಂಡು ಮಾತನಾಡುವುದರಿಂದ ಹಾನಿಯಾಗುವುದು ನಮಗೆ. ಆದ್ದರಿಂದ ತಾಳ್ಮೆ, ಶಾಂತಿಯಿಂದಿರೋಣ. ನಿಮ್ಮ ಆತಂಕವನ್ನು ನಾನು, ದರ್ಶನರಿಗೆ ತಲುಪಿಸಿದ್ದೇನೆ. ಅವರೂ ನಿಮ್ಮ ಪ್ರತಿ ಕಾಳಜಿ ವ್ಯಕ್ತಪಡಿಸಿದ್ದಾರೆ’ ಎಂಬುದಾಗಿ ವಿಜಯಲಕ್ಷ್ಮೀ ದರ್ಶನ್‌ ಪೋಸ್ಟ್‌ ಮಾಡಿದ್ದಾರೆ.

‘ನಾವು ನಮ್ಮ ನ್ಯಾಯಾಲಯಗಳ ಮೇಲೆ ವಿಶ್ವಾಸವಿಡೋಣ. ನಮಗೆ ನ್ಯಾಯ ಸಿಗುವ ಸಂಪೂರ್ಣ ಭರವಸೆ ನನಗಿದೆ. ಇಂತಹ ಕಷ್ಟದ ಸಮದಲ್ಲಿ, ದರ್ಶನರ ಅನುಪಸ್ಥಿತಿಯನ್ನು ದುರುಪಯೋಗ ಪಡೆಸಿಕೊಂಡು ಅವರಿಗೆ ಕೇಡು ಬಯಸುವ,ಮಾಡುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಒಳ್ಳೆಯ ಸಮಯ ಮತ್ತೆ ಮರಳಿ ಬರಲಿದೆ’ ಎಂದು ಅವರು ಹೇಳಿದ್ದಾರೆ. ಇದಕ್ಕೆ ದರ್ಶನ್‌ ಅವರ ನೂರಾರು ಅಭಿಮಾನಿಗಳು ಪ್ರತಿಕ್ರಿಯಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿಗೆ ಸೋಮವಾರ (ಜೂನ್‌ 24) ದರ್ಶನ್ ಪತ್ನಿ ವಿಜಯಲಕ್ಷ್ಮೀ, ಮಗ ವಿನೀಶ್ ಆಗಮಿಸಿದ್ದರು. ದರ್ಶನ್‌ ಭೇಟಿ ಬಳಿಕ ಇದೇ ಮೊದಲ ಬಾರಿಗೆ ವಿಜಯಲಕ್ಷ್ಮೀ ಅವರು ಪೋಸ್ಟ್‌ ಮಾಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!