September 30, 2026
Wednesday, September 30, 2026
spot_img

ಎಲ್‌ಇಟಿ ಮೋಸ್ಟ್ ವಾಂಟೆಡ್ ಉಗ್ರ ಸುಲೈಮಾನ್ ಶಾ ಅಲಿಯಾಸ್ ಮೂಸಾ ಹತ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಪಾಕಿಸ್ತಾನ ಮೂಲದ ಲಷ್ಕರ್‌ ಇ ತೊಯ್ಬಾ ಸಂಘಟನೆಯ ಮೋಸ್ಟ್‌ ವಾಂಟೆಡ್‌ ಉಗ್ರನನ್ನು ಹೊಡೆದುರುಳಿಸಿದೆ.

ಹತ್ಯೆಗೀಡಾದ ಉಗ್ರನನ್ನು ಕಾಶ್ಮೀರ ಮೂಲದ ಚಿನಾರ್ ಕಾರ್ಪ್ಸ್ ಬಹಿರಂಗಪಡಿಸದಿದ್ದರೂ, ಅಧಿಕಾರಿಗಳು ಆತನನ್ನು ಸುಲೇಮಾನ್ ಶಾ ಅಲಿಯಾಸ್ ‘ಮೂಸಾ’ ಎಂದು ಗುರುತಿಸಿದ್ದಾರೆ. ಕಾರ್ಯಾಚರಣೆ ಮುಂದುವರಿದಿದ್ದಾಗಲೇ, ದೂರದ ದುಧ್‌ಪಥ್ರಿ ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ‘ಮೂಸಾ’ ಹತನಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಧ್ಯ ಕಾಶ್ಮೀರದ ಯೂಸ್ಮಾರ್ಗ್‌ನ ಕೊರಾಗ್‌ ಪ್ರದೇಶದಲ್ಲಿ ಸೇನಾಪಡೆಗಳು ಕಾರ್ಯಾಚರಣೆ ಆರಂಭಿಸಿದ್ದವು. ಇಲ್ಲಿ ನಡೆಯುತ್ತಿದ್ದ ಅನುಮಾನಾಸ್ಪದ ಚಟುವಟಿಕೆಗಳನ್ನು ಗಮನಿಸಿ ಉಗ್ರರಿಗೆ ಶರಣಾಗುವಂತೆ ಸೂಚನೆ ನೀಡಲಾಗಿತ್ತು. ತದನಂತರ ಗುಂಡಿನ ಚಕಮಕಿ ನಡೆದಿದ್ದು, ಓರ್ವ ಉಗ್ರನನ್ನು ಸದೆಬಡಿಯಲಾಗಿದೆ. ಕಳೆದ ಹಲವು ವರ್ಷಗಳಿಂದ ಪೀರ್ ಪಂಜಾಲ್ ಪರ್ವತ ಶ್ರೇಣಿಯ ಎರಡೂ ಬದಿಗಳಲ್ಲಿ ನಡೆದ ಹಲವು ದಾಳಿಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಮೂಸಾ ಭದ್ರತಾ ಪಡೆಗಳಿಗೆ ಬೇಕಾಗಿದ್ದ.

Must Read