Sunday, December 10, 2023

Latest Posts

ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪರಿಸ್ಥಿತಿ ಏನಾಗುತ್ತದೋ ನೋಡೋಣ: ಹೆಚ್.ಡಿ.ಕುಮಾರಸ್ವಾಮಿ

ಹೊಸದಿಗಂತ ವರದಿ, ಹಾಸನ

ಜೆಡಿಎಸ್ ಶಾಸಕರನ್ನು ಕಾಂಗ್ರೆಸ್ ನಾಯಕರು ಸೆಳೆಯುತ್ತಿರುವ ವಿಚಾರವಾಗಿ ಕಾಂಗ್ರೆಸ್ ನಾಯಕರ ಮೇಲೆ ಟೀಕಾಪ್ರಹಾರ ನಡೆಸಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು, ಸರಕಾರದ ಭವಿಷ್ಯದ ಬಗ್ಗೆ ಮಾರ್ಮಿಕವಾಗಿ ಹೇಳಿದರು.

ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲರನ್ನೂ ಕರೆದುಕೊಂಡು ಹೋಗಿ ಏನಾಗುತ್ತಿದೆ ಎನ್ನುವುದನ್ನು ನೋಡುತ್ತಿದ್ದೇವೆ. I.N.D.I.A ಮೈತ್ರಿಕೂಟದಿಂದಲೇ ಒಬ್ಬೊಬ್ಬರಾಗಿ ಕಿತ್ತುಕೊಂಡು ಹೋಗುತ್ತಿದ್ದಾರೆ. ಕಾಂಗ್ರೆಸ್ ನವರು ಕುತಂತ್ರಿಗಳು ಎಂದು ಹೇಳಿ ಅಖಿಲೇಶ್ ಯಾದವ್ ಹೊರಗೆ ಕಾಲಿಟ್ಟಿದ್ದಾರೆ. ಮೊದಲು ಅದನ್ನು ಸರಿಪಡಿಸಿಕೊಳ್ಳಿ. ಆಮೇಲೆ ನಮ್ಮನ್ನು ಕರೆದೊಯ್ಯವಿರಂತೆ ಎಂದು ಟೀಕಿಸಿದರು.

ಇದೆಲ್ಲ ಬಹಳ ದಿನಗಳ ಕಾಲ ನಡೆಯುವುದಿಲ್ಲ. ಈ ಹಿಂದೆ ಏನೆಲ್ಲ ಆಗಿದೆ ಎಂದು ನೋಡಿದ್ದೇವೆ. ಎಸ್ ಎಂ ಕೃಷ್ಣ ಮುಖ್ಯಮಂತ್ರಿಯಾದಾಗ ಬಿಜೆಪಿಯಿಂದ ಅಂದು ಯಾರನ್ನೆಲ್ಲ ಪಕ್ಷಕ್ಕೆ ಸೆಳೆಯುವ ಪ್ರಯತ್ನ ಮಾಡಿದರು, 2013ರಲ್ಲಿ ಮುಖ್ಯಮಂತ್ರಿಯಾದ ಸಿದ್ದರಾಮಯ್ಯನವರು ಯಾರನ್ನೆಲ್ಲ ಪಕ್ಷಕ್ಕೆ ಸೇರಿಸಿಕೊಂಡರು? ಕೊನೆಗೆ 78 ಸ್ಥಾನಗಳಿಗೆ ಬಂದು ನಿಂತರು. 1989ರಲ್ಲಿ 180 ಸ್ಥಾನ ಪಡೆದು ಆಳ್ವಿಕೆ ಮಾಡಿದ್ದ ನೀವು, 1994ರಲ್ಲಿ 38 ಸಂಖ್ಯೆಗಳಿಗೆ ಕುಸಿದಿದ್ದಿರಿ. ಆ ದಿನ ದೂರವಿಲ್ಲ ಎಂದು ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.

ರಾಜ್ಯದಲ್ಲಿ ಕಾಣದ ಶಕ್ತಿ ಇದೆ, ದೇವರು ಎಲ್ಲಿವರೆಗೂ ಪಾಪ ಮಾಡುವವರನ್ನು ನೋಡಿಕೊಂಡು ಕೂರುತ್ತಾನೆ?ಯಾವುದೋ ಒಂದು ಶಕ್ತಿ ಕೊನೆಗೆ ತೀರ್ಮಾನ ಮಾಡುತ್ತದೆ. ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಏನಾಗುತ್ತದೆ ಎಂದು ನೋಡೊಣ ಎಂದು ಮಾರ್ಮಿಕವಾಗಿ ಹೇಳಿದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!