ನಮ್ಮ ಸಹೋದರಿಯರೊಂದಿಗೆ ನಿಲ್ಲೋಣ: ಚಂಡೀಗಢ ವಿವಿ ಪ್ರಕರಣ ಕುರಿತು ನಟ ಸೋನು ಸೂದ್ ಟ್ವೀಟ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಚಂಡೀಗಢ ವಿಶ್ವವಿದ್ಯಾಲಯದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸೋನು ಸೂದ್ ಪ್ರತಿಕ್ರಿಯಿಸಿ, ಮನವಿಯೊಂದನ್ನು ಮಾಡಿಕೊಂಡಿದ್ದಾರೆ.

‘ಚಂಡೀಗಡ ವಿಶ್ವವಿದ್ಯಾಲಯದ ಘಟನೆ ತುಂಬಾ ದುರದೃಷ್ಟಕರ. ಈ ಸಮಯದಲ್ಲಿ ನಾವು ನಮ್ಮ ಸಹೋದರಿಯರೊಂದಿಗೆ ನಿಲ್ಲಬೇಕು. ಇದು ಸಮಾಜಕ್ಕೆ ಮಾದರಿಯಾಗಬೇಕಾದ ಸಮಯ, ನಮಗೆ ಪರೀಕ್ಷಾ ಸಮಯ. ಸಹೋದರಿಯರಿಗೆ ಸಂಬಂಧಿಸಿದ ಯಾವುದೇ ವಿಡಿಯೋಗಳನ್ನು ಎಲ್ಲಿಯೂ ಶೇರ್ ಮಾಡಬೇಡಿ. ಜವಾಬ್ದಾರಿಯುತವಾಗಿರಿ’ ಎಂದು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ವಿದ್ಯಾರ್ಥಿನಿಯೊಬ್ಬಳು ತನ್ನ ಖಾಸಗಿ ವಿಡಿಯೋಗಳನ್ನು ತನ್ನ ಪ್ರಿಯಕರನಿಗೆ ಕಳುಹಿಸಿದ್ದಳು. ಈ ಒಂದು ವಿಡಿಯೋ ಮಾತ್ರ ಸೋರಿಕೆ ಆಗಿದೆ. ಬೇರೆ ಯಾವುದೇ ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಡಿಯೋ ಪ್ರಾಥಮಿಕ ತನಿಖೆಯಲ್ಲಿ ಪೊಲೀಸರಿಗೆ ದೊರಕಿಲ್ಲ. ವಿದ್ಯಾರ್ಥಿನಿಯರು ಆತಂಕ ಪಡುವ ಅವಶ್ಯಕತೆ ಇಲ್ಲಎಂದು ಮೋಹಾಲಿ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ವರದಿಗಳನ್ನು ವಿಶ್ವವಿದ್ಯಾಲಯದ ಅಧಿಕಾರಿಗಳು ತಿರಸ್ಕರಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!