ಭಾರತವನ್ನು ಸಶಕ್ತ, ಸದೃಢ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪಿಸಲು ಶ್ರಮಿಸೋಣ: ಸೋಮಶೇಖರ್

ಹೊಸದಿಗಂತ ವರದಿ ಮೈಸೂರು:

ಅರಮನೆ ನಗರಿ ಮೈಸೂರಿನಲ್ಲಿ ಗುರುವಾರ ವಿವಿಧೆಡೆ 74ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.
74ನೇ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಭಾರತವನ್ನು ಸಶಕ್ತ, ಸದೃಢ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ರೂಪಿಸಲು ಶ್ರಮಿಸೋಣ ಎಂದು ಹೇಳಿದರು.

ಭಾರತವನ್ನು ವಿಶ್ವಮಾನ್ಯ ಹಾಗೂ ಬಲಾಢ್ಯ ಗಣರಾಜ್ಯವನ್ನಾಗಿ ರೂಪಿಸುವಲ್ಲಿ ತಮ್ಮ ತನು ಮನ ಧನಗಳಿಂದ ತ್ಯಾಗಗೈದ, ಬಲಿದಾನ ನೀಡಿದ ನಾಯಕರನ್ನು ಅಸಂಖ್ಯಾತ ಯೋಧರನ್ನು ಹಾಗೂ ದೇಶಾಭಿಮಾನಿಗಳನ್ನು ನೆನೆಯುವುದು ಮತ್ತು ಅವರು ಆಶಿಸಿದಂತೆ ರಾಷ್ಟçವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದರು.

ಒಕ್ಕೂಟ ವ್ಯವಸ್ಥೆಯನ್ನು ಒಪ್ಪಿಕೊಂಡು ಭಾರತದ ಸಾರ್ವಭೌಮತೆಗೆ ಧಕ್ಕೆ ತಾರದಂತೆ ತನ್ನ ಅಸ್ಮಿತೆಯನ್ನು ಉಳಿಸಿಕೊಂಡು ಅಭಿವೃದ್ಧಿಯೆಡೆಗೆ ಸಾಗುತ್ತಿರುವ ರಾಜ್ಯ ನಮ್ಮ ಕರ್ನಾಟಕ. ಇಂದು ಕರ್ನಾಟಕದ ಸಾಧನೆ ಅನೇಕ ರಾಜ್ಯಗಳಿಗೆ ಮಾದರಿಯಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ನಮ್ಮ ಸರ್ಕಾರ `ಸರ್ವರಿಗೂ ಸಮಬಾಳು – ಸರ್ವರಿಗೂ ಸಮಪಾಲು’ ಎಂಬ ತತ್ವದಲ್ಲಿ ನಂಬಿಕೆ ಇರಿಸಿದ್ದು ಹಲವು ಹೊಸ ಯೋಜನೆಗಳ ಮೂಲಕ ಗ್ರಾಮೀಣಾಭಿವೃದ್ಧಿ, ಶಿಕ್ಷಣ, ಆರೋಗ್ಯ, ಕೃಷಿ, ನೀರಾವರಿ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಗಮನ ಹರಿಸಿದೆ ಎಂದು ತಿಳಿಸಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಶಯದಂತೆ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಒತ್ತಾಸೆಯ `ಸ್ವಚ್ಛ ಭಾರತ’ ಪರಿಕಲ್ಪನೆಯ ಸಾಕಾರಕ್ಕಾಗಿ ನಾವು ದೃಢ ಹೆಜ್ಜೆ ಇರಿಸಿದ್ದೇವೆ. ನಮ್ಮ ಗ್ರಾಮೀಣ ಪರಿಸರವನ್ನು ಸ್ವಚ್ಛ ಸುಂದರವಾಗಿ ಇರಿಸಿಕೊಳ್ಳುವ ನಿಟ್ಟಿನಲ್ಲಿ ಎಲ್ಲ ಗ್ರಾಮ ಪಂಚಾಯತ್‌ಗಳಲ್ಲಿ ಘನತ್ಯಾಜ್ಯ ನಿರ್ವಹಣಾ ಘಟಕ ಆರಂಭಿಸಲು ಈಗಾಗಲೇ ಚಾಲನೆ ನೀಡಲಾಗಿದೆ ಎಂದು ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!