Sunday, March 26, 2023

Latest Posts

ಒಂಬತ್ತು ಪ್ರತಿಪಕ್ಷ ನಾಯಕರಿಂದ ಪ್ರಧಾನಿ ಮೋದಿಗೆ ಪತ್ರ : ಆ ಪತ್ರದಲ್ಲೇನಿದೆ ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ಪ್ರಧಾನಿ ನರೇಂದ್ರ ಮೋದಿಗೆ ಪ್ರತಿಪಕ್ಷ ನಾಯಕರು ಪತ್ರ ಬರೆದಿದ್ದಾರೆ.

ಒಂಬತ್ತು ಪತ್ರಿಪಕ್ಷಗಳ ನಾಯಕರ ಗುಂಪು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಂಟಿ ಪತ್ರ ಬರೆದಿದ್ದು, ಸಿಬಿಐ, ಜಾರಿ ನಿರ್ದೇಶನಾಲಯ, ಆದಾಯ ತೆರಿಗೆ ಇಲಾಖೆಯಂತಹ ಕೇಂದ್ರೀಯ ಸಂಸ್ಥೆಗಳನ್ನು ಸರ್ಕಾರವು ತಮ್ಮ ನಾಯಕರನ್ನು ಬಂಧಿಸಲು ದುರುಪಯೋಗಪಡಿಸಿಕೊಳ್ಳುತ್ತಿದೆ. ಈ ಬಗ್ಗೆ ಪ್ರಧಾನಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ಕಾಂಗ್ರೆಸ್​ ಹೊರತುಪಡಿಸಿ 9 ಪ್ರತಿಪಕ್ಷ ನಾಯಕರುಗಳು ಮೋದಿಗೆ ಪತ್ರ ಬರೆದಿದ್ದಾರೆ.

ಮುಖ್ಯಮಂತ್ರಿಗಳಾದ ಕೆ ಚಂದ್ರಶೇಖರ್ ರಾವ್, ಮಮತಾ ಬ್ಯಾನರ್ಜಿ, ಭಗವಂತ್ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್ ಸೇರಿದಂತೆ ವಿಪಕ್ಷ ನಾಯಕರು ಸಹಿ ಹಾಕಿದ್ದು, ಕಾಂಗ್ರೆಸ್ ಇದರಿಂದ ದೂರ ಉಳಿದಿದೆ.

ನ್ಯಾಷನಲ್ ಕಾನ್ಫರೆನ್ಸ್‌ನ ಫಾರೂಕ್ ಅಬ್ದುಲ್ಲಾ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಶಿವಸೇನೆಯ ಉದ್ದವ್ ಠಾಕ್ರೆ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಪತ್ರಕ್ಕೆ ಸಹಿ ಹಾಕಿದ್ದಾರೆ.

2014 ರಿಂದ ನಿಮ್ಮ ಆಡಳಿತದ ಅಡಿಯಲ್ಲಿ ತನಿಖಾ ಸಂಸ್ಥೆಗಳು ಬುಕ್ ಮಾಡಿದ, ಬಂಧಿಸಿದ, ದಾಳಿ ಮಾಡಿದ ಅಥವಾ ವಿಚಾರಣೆಗೆ ಒಳಗಾದ ಒಟ್ಟು ಪ್ರಮುಖ ರಾಜಕಾರಣಿಗಳ ಪೈಕಿ, ಗರಿಷ್ಠ ಪ್ರತಿಪಕ್ಷಗಳಿಗೆ ಸೇರಿದೆ. ಕುತೂಹಲಕಾರಿಯಾಗಿ ಬಿಜೆಪಿಗೆ ಸೇರುವ ವಿರೋಧ ಪಕ್ಷದ ರಾಜಕಾರಣಿಗಳ ವಿರುದ್ಧದ ಪ್ರಕರಣಗಳ ಬಗ್ಗೆ ತನಿಖಾ ಸಂಸ್ಥೆಗಳು ನಿಧಾನವಾಗುತ್ತವೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಕಾಂಗ್ರೆಸ್‌ನಲ್ಲಿದ್ದಾಗ ಶಾರದಾ ಚಿಟ್ ಫಂಡ್ ಹಗರಣದ ಕುರಿತು 2014 ಮತ್ತು 2015 ರಲ್ಲಿ ಸಿಬಿಐ ಮತ್ತು ಇಡಿ ಸ್ಕ್ಯಾನರ್‌ಗೆ ಒಳಗಾದ ಉದಾಹರಣೆಯನ್ನು ವಿರೋಧ ಪಕ್ಷದ ನಾಯಕರು ನಮೂದಿಸಿದ್ದಾರೆ.

2014 ರಿಂದ ಪ್ರತಿಪಕ್ಷ ನಾಯಕರ ವಿರುದ್ಧ ದಾಳಿಗಳು, ಪ್ರಕರಣಗಳು ಮತ್ತು ಬಂಧನಗಳ ಸಂಖ್ಯೆಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಲಾಲು ಪ್ರಸಾದ್ ಯಾದವ್ (ರಾಷ್ಟ್ರೀಯ ಜನತಾ ದಳ), ಸಂಜಯ್ ರಾವತ್ (ಶಿವಸೇನೆ), ಅಜಮ್ ಖಾನ್ (ಸಮಾಜವಾದಿ ಪಕ್ಷ) ), ನವಾಬ್ ಮಲಿಕ್, ಅನಿಲ್ ದೇಶಮುಖ್ (ಎನ್‌ಸಿಪಿ), ಅಭಿಷೇಕ್ ಬ್ಯಾನರ್ಜಿ (ಟಿಎಂಸಿ), ಬ್ಯಾನರ್ಜಿ ವಿರುದ್ಧ ತನಿಖೆಗಳು ನಡೆದಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!