ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನು ಢಾಕಾಗೆ ಹಸ್ತಾಂತರಿಸುವಂತೆ ಕೋರಿ ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನುಸ್ ನೇತೃತ್ವದ ಬಾಂಗ್ಲಾದೇಶದ ಮಧ್ಯಂತರ ಸರ್ಕಾರದಿಂದ ಅಧಿಕೃತ ವಿನಂತಿಯನ್ನು ಭಾರತ ಸ್ವೀಕರಿಸಿದೆ.
ಈ ಕುರಿತು ಮಾಹಿತಿ ನೀಡಿದ ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಹಿರಿಯ ಅಧಿಕಾರಿ, ಈ ವಿಷಯದ ಬಗ್ಗೆ ಪ್ರಸ್ತುತ ಯಾವುದೇ ಪ್ರತಿಕ್ರಿಯೆ ನೀಡಿಲ್ಲ ಎಂದು ಹೇಳಿದರು.
ಹಸ್ತಾಂತರ ವಿನಂತಿಗೆ ಸಂಬಂಧಿಸಿದಂತೆ ಬಾಂಗ್ಲಾದೇಶ ಹೈಕಮಿಷನ್ ನಿಂದ ನಾವು ಇಂದು ಪತ್ರವನ್ನು ಸ್ವೀಕರಿಸಿದ್ದೇವೆ ಎಂದು ನಾವು ದೃಢಪಡಿಸುತ್ತೇವೆ. ಪ್ರಸ್ತುತ, ಈ ವಿಷಯದ ಬಗ್ಗೆ ನಾವು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಅಧಿಕಾರಿ ಹೇಳಿದರು.