ಹೊಸದಿಗಂತ ವರದಿ ಹುಬ್ಬಳ್ಳಿ:
ರೈತ ವಿರೋಧಿ ಮೂರು ಕೃಷಿ ಕಾಯ್ದೆ ಹಿಂಪಡೆಯಬೇಕು ಹಾಗೂ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಡಿ.5ರಂದು ಜಿಲ್ಲಾಧಿಕಾರಿ ಮೂಲಕ ಮನವಿ ಸಲ್ಲಿಸಿ ಸಕಾರಕ್ಕೆ ಒತ್ತಾಯಿಸಲಾಗುವುದು ಎಂದು ಸಂಘ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕುನ್ನೂರ ಹೇಳಿದರು.
ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸರಕಾರಿ ಸಂಘಗಳಲ್ಲಿ ರೈತರು ತೆಗೆದುಕೊಂಡ ಸಾಲವನ್ನು ಸಂಪೂರ್ಣ ಮನ್ನಾ ಮಾಡಬೇಕು. ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಸರ್ಕಾರ ನಿಗಧಿಗೊಳಿಸಬೇಕು ಎಂದು ಆಗ್ರಹಿಸಿದರು.
ನೀರಾವರಿಗೆ ಸಹಕಾರಿಯಾದ ಪಂಪಸೇಟ್ ಗಳಿಗೆ ವಿದ್ಯುತ್ ಮೀಟರ್ ಅಳವಡಿಸಿರುವು ಸರಿಯಲ್ಲ. 2018/2022ರಲ್ಲಿ ರಾಜ್ಯಾದ್ಯಾಂತ ತೀವ್ರ ಅತಿವೃಷ್ಟಿಯಿಂದ ಮಳೆಯಿಂದ ರೈತರು ಬೆಳೆದ ಬೆಳೆಹಾನಿಯಾಗಿದ್ದು, ಪ್ರತಿ ಹೆಕ್ಟೇರ್ ಜಮೀನಿಗೆ 35 ಸಾವಿರ ರೂ. ಬಿಡುಗಡೆ ಮಾಡಲು ಒತ್ತಾಯಿಸಲಾಗಿತ್ತು. ಆದರೆ ಸರ್ಕಾರ ಕೇವಲ 13ಸಾವಿರ ರೂ ಮಾತ್ರ ಬಿಡುಗಡೆ ಮಾಡಿದೆ ಎಂದರು.
ಬೆಂಬಲ ಬೆಲೆ ಖರೀದಿ ಕೇಂದ್ರ ಹುಬ್ಬಳ್ಳಿ ಮಟ್ಟದಲ್ಲಿ ಸ್ಥಾಪಿಸಬೇಕು. ಪ್ರತಿ ವರ್ಷ ಬಿತ್ತನೆಗೆ ಸೂಕ್ತ ಬೀಜ, ಗೊಬ್ಬರ ಹಾಗೂ ಕೃಷಿ ಸಲಕರಣೆಗಳನ್ನು ನೀಡಬೇಕು ಎಂದು ಒತ್ತಾಯಿಸಿದರು.