ಹೊಸದಿಗಂತ ವರದಿ, ವಿಜಯಪುರ:
ರಾಜ್ಯದಲ್ಲಿ ಬರ ಹಿನ್ನೆಲೆ ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಿಂದ ಯಾವುದೇ ಉತ್ತರ ಬಂದಿಲ್ಲ. ಎನ್’ಡಿಆರ್’ಎಫ್ ಬದಲಾವಣೆ ಆಗಬೇಕು ಎನ್ನುವ ವಿಚಾರದಲ್ಲಿ ಬದಲಾವಣೆಗಾಗಿ ಪತ್ರ ಬರಯಲಾಗಿದ್ದು, ಅದಕ್ಕೆ ಉತ್ತರ ನೀಡಿಲ್ಲ. ಅಲ್ಲದೇ, ಬದಲಾವಣೆನೂ ಮಾಡಿಲ್ಲ ಎಂದ ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೇ, ಮುಖ್ಯಮಂತ್ರಿ ಸ್ಥಾನದಿಂದ ಸಿದ್ದರಾಮಯ್ಯ ಕೆಳಗಿಳಿಸಿ ಡಿ.ಕೆ.ಶಿವಕುಮಾರ ಮುಖ್ಯಮಂತ್ರಿ ಆಗಲು ಪ್ರಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ, ನಮ್ಮ ಪಕ್ಷದ ವಿಚಾರ ನಾವು ನೋಡಿಕೊಳ್ಳುತ್ತೇವೆ ಎಂದರು.