5 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ: 12ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಶುಕ್ರವಾರ ರಾತ್ರಿ ಮುಂಬೈನ ಝವೇರಿ ಬಜಾರ್ ಪ್ರದೇಶದಲ್ಲಿ 5 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, 12ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿವೆ. ಮುಂಬೈನ ಝವೇರಿ ಬಜಾರ್ ಪ್ರದೇಶದಲ್ಲಿನ ಕಟ್ಟಡದಲ್ಲಿ ಬೆಂಕಿಯು ಮೂರನೇ ಅಂತಸ್ತಿನವರೆಗೂ ವ್ಯಾಪಿಸಿದೆ.

ಶುಕ್ರವಾರ ಮುಂಜಾನೆ 1:38 ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಗ್ನಿಶಾಮಕ ಅಧಿಕಾರಿಗಳು ತಿಳಿಸಿದ್ದಾರೆ. ಕಟ್ಟಡದಲ್ಲಿ ಸಿಲುಕಿದ್ದ ಎಲ್ಲ ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಇಲ್ಲಿಯವರೆಗೆ ಯಾವುದೇ ಗಾಯ-ಸಾವು, ನೋವು ಹಾಗೂ ಅವಘಡಕ್ಕೆ ಕಾರಣ ವರದಿಯಾಗಿಲ್ಲ.

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ..

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!