March 26, 2026
Thursday, March 26, 2026
spot_img

ಗ್ರೀನ್‌ ಪಟಾಕಿ ಬಿಟ್ಟು ಬೇರೆ ಮಾರಿದ್ರೆ ಲೈಸೆನ್ಸ್‌ ರದ್ದು!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದರೆ ಅಂತಹ ಅಂಗಡಿ ಲೈಸೆನ್ಸ್ ಕ್ಯಾನ್ಸಲ್ ಮಾಡುವುದಾಗಿ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ದೀಪಾವಳಿಯಲ್ಲಿ ಹಸಿರು ಪಟಾಕಿ ಮಾತ್ರ ಹಚ್ಚಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಇದೆ. ಸುಪ್ರೀಂ ಕೋರ್ಟ್ ಆದೇಶ ಇದ್ದರೂ, ಭಾರ ಇರುವ, ಲೋಹ ಭರಿತ ಪಟಾಕಿ ಬಳಕೆ ಆಗುತ್ತಿದೆ. ಅಧಿಕಾರಿಗಳಿಗೆ ಸೂಚನೆ ಕೊಡುತ್ತಿದ್ದೇನೆ.

ಯಾವುದೇ ಹಸಿರು ಪಟಾಕಿ ಬಿಟ್ಟು ಬೇರೆಯದಕ್ಕೆ ಅವಕಾಶ ಕೊಡಬಾರದು. ಮಳಿಗೆಗಳಿಗೆ ಹೋಗಿ ಪರಿಶೀಲನೆ ಮಾಡಬೇಕು. ಪರಿಸರ ಸ್ನೇಹಿ ಪಟಾಕಿ ಮಾಡುತ್ತೇವೆ ಅಂತ ಮುಚ್ಚಿಳಿಕೆ ಬರೆದು ಕೊಟ್ಟಿದ್ದಾರೆ. ಯಾರಾದರೂ ನಿಯಮ ಉಲ್ಲಂಘನೆ ಮಾಡಿ ಪಟಾಕಿ ಮಾರಿದರೆ ಅವರ ಲೈಸೆನ್ಸ್ ರದ್ದು ಮಾಡಲು ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !