ಹೊಸ ದಿಗಂತ ವರದಿ, ಚಿತ್ರದುರ್ಗ:
ಸಿದ್ದರಾಮಯ್ಯ ಆಡಳಿತದಲ್ಲಿ ಭ್ರಷ್ಟರ ರಕ್ಷಣೆ ಮಾಡಿದ್ದಾರೆ. ಆದರೆ ಬಿಜೆಪಿ ಸರ್ಕಾರ ಭ್ರಷ್ಟ ಸರ್ಕಾರ ಎಂದು ಆರೋಪ ಮಾಡುವ ಮೂಲಕ ತಮ್ಮ ತಪ್ಪು ಮುಚ್ಚಿಕೊಳ್ಳುವ ಕೆಲಸ ಮಾಡುತ್ತಿದ್ದಾರೆ ಎಂದು ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.
ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ವಿರುದ್ಧ ಸಾವಿರ ಸಲ ಸುಳ್ಳು ಹೇಳಿ ಸತ್ಯ ಮಾಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ಪಿಎಸ್ಐ ಪರೀಕ್ಷೆ ಅಕ್ರಮದ ವಿರುದ್ಧ ಸರ್ಕಾರದ ಕ್ರಮ ಕೈಗೊಂಡಿದೆ. ಪಿಎಸ್ಐ ನೇಮಕಾಇ ರದ್ದು ಮಾಡಿದ್ದು, ಮರು ಪರೀಕ್ಷೆಗೆ ಆದೇಶ ಮಾಡಲಾಗಿದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯಲ್ಲಿ ಲೋನ್ ನೀಡುವಲ್ಲಿ ಲೋಪವಾಗಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ನಾನು ಸಮಾಜ ಕಲ್ಯಾಣ ಸಚಿವನಾಗಿದ್ದಾಗ ಪತ್ತೆ ಮಾಡಿ ಕ್ರಮ ಕೈಗೊಳ್ಳಲಾಗಿತ್ತು. ಹಾಗಾಗಿ ಭ್ರಷ್ಟಾಚಾರ ವಿಚಾರವನ್ನು ಬಿಜೆಪಿ ಬಹಳ ದೂರವಿಟ್ಟಿದೆ. ಆದರೆ ಕಾಂಗ್ರೆಸ್ ಪಕ್ಷ ಶಾಂತಿ ಕದಡುವ ಕೆಲಸ ಮಾಡುತ್ತಿದೆ. ಗಲಭೆ ಆರೋಪಿಗಳ ಕುಟುಂಬಕ್ಕೆ ಕಿಟ್ ನೀಡಿದ ಜಮೀರ್ ಇದಕ್ಕೆ ಉತ್ತಮ ಉದಾಹರಣೆ ಎಂದು ವಾಗ್ದಾಳಿ ನಡೆಸಿದರು.
ಈ ಬಾರಿಯ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವ ಕುರಿತ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು ಈ ಬಾರಿಯ ಚುನಾವಣೆಗೆ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವುದಾಗಿ ತಿಳಿಸಿದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ