ಹೊಸದಿಗಂತ ಡಿಜಿಟಲ್ ಡೆಸ್ಕ್:
ಪವಿತ್ರ ಅಮರನಾಥ ಯಾತ್ರೆಗೆ ಇಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಚಾಲನೆ ನೀಡಿದ್ದಾರೆ.
ನಾಳೆಯಿಂದ ಯಾತ್ರೆ ಆರಂಭವಾಗಲಿದ್ದು, ಇಂದು ಜಮ್ಮುವಿನ ಭಗವತಿ ನಗರದಲ್ಲಿ 5,880 ಭಕ್ತರಿದ್ದ ಮೊದಲ ಶಿಬಿರಕ್ಕೆ ಧ್ವಜ ಹಾರಿಸುವ ಮೂಲಕ ಚಾಲನೆ ನೀಡಲಾಯಿತು.
ಜು.3ರಂದು ಬಾಲ್ಟಾಲ್ ಮತ್ತು ಪಹಲ್ಗಾಮ್ ಮಾರ್ಗಗಳಿಂದ ಯಾತ್ರೆ ಅಧಿಕೃತವಾಗಿ ಪ್ರಾರಂಭವಾಗಲಿದ್ದು, ಆ.7ರವರೆಗೆ 38 ದಿನಗಳ ಕಾಲ ಅಮರನಾಥ ಯಾತ್ರೆ ನಡೆಯಲಿದೆ.
ಜಮ್ಮು-ಶ್ರೀನಗರ ಹೆದ್ದಾರಿ ಸಾವಿರಾರು ಯಾತ್ರಿಕರಿಗೆ ಪ್ರಮುಖ ಮಾರ್ಗಗಳಲ್ಲಿ ಒಂದಾಗಿದೆ. ಹೀಗಾಗಿ ಸಿಆರ್‌ಪಿಎಫ್ ಅದರ ಮೇಲೆ ಕಣ್ಗಾವಲು ಹೆಚ್ಚಿಸಿದೆ.