ಟೀಂ ಇಂಡಿಯಾಗೆ ಆಯ್ಕೆಯಾದ ವೇಗದ ಬೌಲರ್‌ಗೆ ಲೆಫ್ಟಿನೆಂಟ್ ಗವರ್ನರ್ ಅಭಿನಂದನೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

15ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಅತಿವೇಗದ ಬೌಲಿಂಗ್ ಮೂಲಕ ಗಮನ ಸೆಳೆದಿರುವ ಸನ್‌ರೈಸರ್ಸ್ ಹೈದರಾಬಾದ್ ತಂಡದ ವೇಗಿ ಉಮ್ರಾನ್ ಮಲಿಕ್ ದ. ಆಫ್ರಿಕಾ ಸರಣಿಗೆ ಟೀಂ ಇಂಡಿಯಾಗೆ ಆಯ್ಕೆಯಾಗಿದ್ದಾರೆ. ಟೀಂ ಇಂಡಿಯಾದಲ್ಲಿ ಸ್ಥಾನ ಪಡೆದುಕೊಳ್ಳುವಲ್ಲಿ ಯಶಸ್ವಿಯಾದ ಉಮ್ರಾನ್‌ ಮಿಲಿಕ್‌ ಹಾಗೂ ಅವರ ಕುಟುಂಬವನ್ನು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭೇಟಿಯಾಗಿ ಅಭಿನಂದಿಸಿದ್ದಾರೆ.

ಉಮ್ರಾನ್ ಮಲಿಕ್ ದೇಶವೇ ಹೆಮ್ಮೆ ಪಡುವಂತೆ ಮಾಡಿದ್ದಾರೆ. ಜಮ್ಮು-ಕಾಶ್ಮೀರ ಸರ್ಕಾರ ಮಲಿಕ್‌ ಅವರ ತರಬೇತಿ ಸೇರಿದಂತೆ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸುತ್ತದೆ. ಜೊತೆಗೆ ಕ್ರೀಡಾ ನಿಯಮಗಳಿಗನುಸಾರವಾಗಿ ಸರ್ಕಾರಿ ಉದ್ಯೋಗ ನೀಡುವ ಭರವಸೆ ಕೂಡ ನೀಡಿದ್ದಾರೆ. ಉಮ್ರಾನ್‌ ಮಲಿಕ್‌ ಸರ್ಕಾರಿ ಸೇವೆಗೆ ಸೇರಲು ಬಯಸಿದಾಗ ಅವರಿಗೆ ಸರ್ಕಾರಿ ಉದ್ಯೋಗ ನೀಡಲಾಗುವುದು ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಿಳಿಸಿದ್ದಾರೆ.

ಐಪಿಎಲ್‌ ಇತಿಹಾಸದಲ್ಲಿಯೇ ಎರಡನೇ ಅತಿವೇಗದ ಎಸೆದ ದಾಖಲೆ ಜಮ್ಮು ಕಾಶ್ಮೀರ ಮೂಲದ ಈ ಬೌಲರ್‌ ಹೆಸರಿನಲ್ಲಿದೆ. ಉಮ್ರಾನ್ ಮಲಿಕ್ 157 ಕಿಲೋ ಮೀಟರ್‌ ವೇಗದಲ್ಲಿ ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ. 22 ವರ್ಷದ ಉಮ್ರಾನ್ ಮಲಿಕ್ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಗಮನ ಸೆಳೆದಿದ್ದು, ಟೀಂ ಇಂಡಿಯಾದಲ್ಲಿಯೂ ಮಿಂಚುವ ಭರವಸೆ ಮೂಡಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!