ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದ್ದು, ಇಡೀ ಕುಟುಂಬ ಅತೀವ ದುಃಖದಲ್ಲಿದೆ.
ಜ್ವಲ್ ರೇವಣ್ಣಗೆ ಶಿಕ್ಷೆಯ ಪ್ರಮಾಣ ಘೋಷಣೆಯಾಗುತ್ತಿದ್ದಂತೆಯೇ ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡ ಕಣ್ಣೀರು ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಗುರುವಾರ ಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಿತ್ತು. ಮಧ್ಯಾಹ್ನದಿಂದ ಟಿವಿ ನೋಡುತ್ತಿದ್ದ ದೇವೇಗೌಡ, ಶಿಕ್ಷೆ ಪ್ರಕಟ ಆಗುತ್ತಿರುವಂತೆಯೇ ಅಘಾತಕ್ಕೊಳಗಾಗಿ ಕಣ್ಣೀರು ಹಾಕಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಜ್ವಲ್ ರೇವಣ್ಣಗೆ ಜೀವನಪರ್ಯಂತ ಜೈಲು ಶಿಕ್ಷೆಯಾಗಿದ್ದು, ಇಲ್ಲಿಯವರೆಗೂ ಎದುರಿಸಿದ್ದ ಜೈಲು ವಾಸದ ಅವಧಿಯನ್ನು ಶಿಕ್ಷೆಯ ಅವಧಿ ಎಂದು ಪರಿಗಣಿಸಲಾಗುವುದಿಲ್ಲ. ಆದ್ದರಿಂದ ಶಿಕ್ಷೆಯ ಪ್ರಮಾಣ ಪ್ರಕಟಗೊಂಡ ಬಳಕವಷ್ಟೇ ಜೈಲು ವಾಸದ ಅವಧಿ ಪ್ರಾರಂಭವಾಗಲಿದೆ.