October 15, 2026
Thursday, October 15, 2026
spot_img

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ಅಂದು BSY ಹೇಳಿದ್ದು ಇಂದು ನಿಜವಾಯ್ತು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿ ಮುಖಂಡ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಸುದೀರ್ಘ ವಿಚಾರಣೆಯ ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿ ಆರೋಪಿಗಳನ್ನು ಅಪರಾಧಿಗಳೆಂದು ಘೋಷಿಸಿರುವ ಕೋರ್ಟ್, ಎಲ್ಲರಿಗೂ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

ಈ ಮಹತ್ವದ ತೀರ್ಪಿನ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, “ನಾನು ಅಂದು ಆಡಿದ ಮಾತು ಇಂದು ಸತ್ಯವಾಗಿದೆ. ಸತ್ಯಕ್ಕೆ ಜಯ ಸಿಕ್ಕಿದೆ” ಎಂದು ಹರ್ಷ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ನ್ಯಾಯಕ್ಕಾಗಿ ಹೋರಾಡಿದ ಯೋಗೀಶ್ ಗೌಡ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ಆಶಿಸಿದ್ದಾರೆ.

ಆರಂಭದಲ್ಲಿ ಈ ಕೊಲೆಯನ್ನು ಕೇವಲ ಜಮೀನು ವಿವಾದವೆಂದು ಸ್ಥಳೀಯ ಪೊಲೀಸರು ತನಿಖೆ ನಡೆಸಿದ್ದರು. ಆದರೆ, ಕುಟುಂಬದ ತೀವ್ರ ಒತ್ತಾಯದ ಮೇರೆಗೆ ಅಂದಿನ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ಇಂದು ಆ ತನಿಖೆಯ ಫಲವಾಗಿ ತಪ್ಪಿತಸ್ಥರಿಗೆ ಶಿಕ್ಷೆಯಾಗಿದೆ.

Must Read