ಹೊಸ ದಿಗಂತ ಡಿಜಿಟಲ್ ಡೆಸ್ಕ್:
ವಿನಯ್ ಕುಲಕರ್ಣಿ ಜೀವಾವಧಿ ಶಿಕ್ಷೆ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದ್ದು, ಈ ಬೆಳವಣಿಗೆಯ ಕುರಿತು ಪ್ರತಿಕ್ರಿಯಿಸಿರುವ ಡಿ.ಕೆ. ಶಿವಕುಮಾರ್, ಈ ಪ್ರಕರಣದ ಹಿಂದೆ ದೊಡ್ಡ ಸಂಚು ಇದೆ. ಬಿ-ರಿಪೋರ್ಟ್ ಸಲ್ಲಿಕೆಯಾಗುವ ಹಂತದಲ್ಲಿದ್ದ ಪ್ರಕರಣವನ್ನು ಮತ್ತೆ ಹೊರ ತೆಗೆದಿದ್ದಾರೆ. ವಿನಯ್ ಕುಲಕರ್ಣಿ ಅವರ ಬೆಳವಣಿಗೆಯನ್ನು ಸಹಿಸದ ಬಿಜೆಪಿ ನಾಯಕರು, ಅವರನ್ನು ರಾಜಕೀಯವಾಗಿ ಮುಗಿಸಲು ಈ ಸಂಚು ರೂಪಿಸಿದ್ದಾರೆ ಎಂದು ಆರೋಪ ಮಾಡಿದರು.
ಈ ಹಿಂದೆ ನನಗೂ ಈ ರೀತಿ ಕಿರುಕುಳ ನೀಡಲಾಗಿತ್ತು. ನಾನು ಜೈಲಿಗೆ ಹೋಗಿ ಬಂದೆ, ಆದರೆ ಸುಪ್ರೀಂಕೋರ್ಟ್‌ನಲ್ಲಿ ನನಗೆ ನ್ಯಾಯ ಸಿಕ್ಕಿತು. ನನಗೆವಿಶ್ವಾಸ ಇದೆ ವಿನಯ್ ಕುಲಕರ್ಣಿ ತಪ್ಪು ಮಾಡಿಲ್ಲ . ಅವರ ಕುಟುಂಬದ ಜೊತೆ ನಾನು ಮಾತನಾಡಿದ್ದೇನೆ. ಅವರನ್ನು ನಂಬಿದ ದೇವರು ಕೈಬಿಡುವುದಿಲ್ಲ ಎಂದು ಧೈರ್ಯ ತುಂಬಿದರು.



