ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಈ ಹಿನ್ನೆಲೆ ಅವರು ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ .
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ವಿನಯ್ ಕುಲಕರ್ಣಿ ಸಹಿತ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದರು. ಇದರಿಂದ ಯಾವುದೇ ಶಾಸಕನ ವಿರುದ್ಧ 2 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣವೇ ಶಾಸಕ ಸ್ಥಾನ ರದ್ದಾಗುತ್ತದೆ. ಹಾಗಾಗಿ ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದಾಗಿದೆ.
ಜನಪ್ರತಿನಿಧಿ ಕಾಯ್ದೆ, 1951 ರ ಪ್ರಕಾರ ಶಾಸಕರೊಬ್ಬರು ಅಪರಾಧಿ ಎಂದು ಸಾಬೀತಾಗಿದ್ದಲ್ಲಿ ತಕ್ಷಣ, ಅವರ ಶಾಸಕ ಸ್ಥಾನ ಅಧಿಕೃತವಾಗಿ ರದ್ದಾಗುತ್ತದೆ. ಕೋರ್ಟ್ ಕನಿಷ್ಠ 2 ವರ್ಷ ಅಥವಾ ಅದಕ್ಕಿಂತ ಹೆಚ್ಚು ಅವಧಿಯ ಜೈಲು ಶಿಕ್ಷೆ ವಿಧಿಸಿದರೆ, ಅವರು ತಕ್ಷಣವೇ ತಮ್ಮ ಸ್ಥಾನದಿಂದ ಅನರ್ಹಗೊಳ್ಳುತ್ತಾರೆ. ಜೊತೆಗೆ ಜೈಲಿನಿಂದ ಬಿಡುಗಡೆಯಾದ ದಿನದಿಂದ ಮುಂದಿನ 6 ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ.



