Friday, June 2, 2023

Latest Posts

ಜೀವ ಹೋಗುವಷ್ಟು ಬಿಸಿಲು, ಮಹಾರಾಷ್ಟ್ರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಬಂದಿದ್ದ11 ಮಂದಿ ತಾಪಕ್ಕೆ ಬಲಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾರಾಷ್ಟ್ರದಲ್ಲಿ ಭೂಷಣ್ ಪ್ರಶಸ್ತಿ ಸಮಾರಂಭದಲ್ಲಿ ಬಯಲಿನಲ್ಲಿ ಸುಡು ಬಿಸಿಲಿನಲ್ಲಿ ಕುಳಿತಿದ್ದ 11 ಮಂದಿ ಹೀಟ್ ಸ್ಟ್ರೋಕ್‌ನಿಂದ ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈ ಬಗ್ಗೆ ಮಾಹಿತಿ ನೀಡಿದ್ದು, ಬಿಸಿಲಿನ ಝಳಕ್ಕೆ ಸಾಕಷ್ಟು ಮಂದಿಗೆ ತೊಂದರೆಯಾಗಿದೆ. ಆರೋಗ್ಯ ಸಮಸ್ಯೆಯಿಂದ ಸಾಕಷ್ಟು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 11 ಮಂದಿ ಹೀಟ್ ಸ್ಟ್ರೋಕ್‌ನಿಂದ ಮೃತಪಟ್ಟಿದ್ದಾರೆ ಎಂದಿದ್ದಾರೆ.

At least eight die due to heat stroke during Maharashtra Bhushan award  ceremony - The Hinduಮಹಾರಾಷ್ಟ್ರ ಸರ್ಕಾರ ಸ್ಥಾಪಿಸಿದ ಈ ಪ್ರಶಸ್ತಿಯನ್ನು ಸಾಮಾಜಿಕ ಕಾರ್ಯಕರ್ತ ಅಪ್ಪಾ ಸಾಹೇಬ್ ಅವರಿಗೆ ಪ್ರದಾನ ಮಾಡಲಾಗಿತ್ತು. ನವಿ ಮುಂಬೈನಲ್ಲಿ ಕಾರ್ಯಕ್ರಮ ನಡೆದಿದ್ದು, ಭಾನುವಾರ ತಾಪಮಾನ ಗರಿಷ್ಠ 38 ಡಿಗ್ರಿ ಸೆಲ್ಶಿಯಸ್‌ನಷ್ಟಿತ್ತು.

ಬೃಹತ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಾಗರೋಪಾದಿಯಲ್ಲಿ ಜನ ನೆರೆದಿದ್ದರು. ಅಪ್ಪಾಸಾಹೇಬ್ ಅನುಯಾಯಿಗಳು ಬೆಳಗ್ಗೆಯೇ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಬೆಳಗ್ಗೆ 1:30 ಕ್ಕೆ ಕಾರ್ಯಕ್ರಮ ಆರಂಭವಾಗಿದ್ದು, ಮಧ್ಯಾಹ್ನ 1 ಗಂಟೆಗೆ ಮುಕ್ತಾಯವಾಗಿತ್ತು. ಜನರಿಂದ ಮೈದಾನ ತುಂಬಿ ತುಳುಕುತ್ತಿದ್ದು, ಕಾರ್ಯಕ್ರಮ ವೀಕ್ಷಣೆಗೆ ಆಡಿಯೋ ಹಾಗೂ ವಿಡಿಯೋ ಸೌಲಭ್ಯ ಮಾಡಲಾಗಿತ್ತು.

Maharashtra Bhushan Award ceremony turns deadly; 11 die, over 600 suffer  heatstroke in Kharghar | Navi Mumbai News - Times of Indiaಬೃಹತ್ ಮೈದಾನದಲ್ಲಿ ಕೂರಲು ಆಸನದ ವ್ಯವಸ್ಥೆ ಮಾಡಲಾಗಿತ್ತು. ಆದರೆ ಶಾಮಿಯಾನ ಇರಲಿಲ್ಲ. ಸರ್ಕಾರ ಮೃತರ ಕುಟುಂಬಕ್ಕೆ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!