ದರ್ಶನ್‌ಗೆ ಜೀವಾವಧಿ ಶಿಕ್ಷೆ? ಏನ್‌ ಟ್ವೀಟ್‌ ಮಾಡಿದ್ದಾರೆ ಮೋಹಕ ತಾರೆ ರಮ್ಯಾ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ನಟ ದರ್ಶನ್‌ ಕೊಲೆ ಆರೋಪದಲ್ಲಿ ಪೊಲೀಸರ ವಶದಲ್ಲಿದ್ದಾರೆ. ಈ ಮಧ್ಯೆ ದರ್ಶನ್‌ಗೆ ಮರಣದಂಡನೆ ಆಗಬಹುದು ಎನ್ನುವ ಟ್ವೀಟ್‌ಗಳು ಹರಿದಾಡಿದ್ದು, ನಟಿ ರಮ್ಯಾ ಅದನ್ನು ರಿಟ್ವೀಟ್‌ ಮಾಡಿದ್ದಾರೆ.

ಕರ್ನಾಟಕ ಬಾಕ್ಸ್ ಆಫೀಸ್ ಹೆಸರಿನ ಟ್ವಿಟ್ಟರ್ ಖಾತೆಯಿಂದ ‘ದರ್ಶನ್​ಗೆ ಸೆಕ್ಷನ್ 302ರ ಅಡಿಯಲ್ಲಿ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆ ಶಿಕ್ಷೆ ವಿಧಿಸಲಾಗುತ್ತದೆ. ಒಂದೊಮ್ಮೆ ಈ ಪ್ರಕರಣದಲ್ಲಿ ದರ್ಶನ್​ಗೆ ಶಿಕ್ಷೆ ಆಗದಿದ್ದಲ್ಲಿ ಹಣದ ಪ್ರಭಾವ ಕೆಲಸ ಮಾಡಿದೆ ಎಂದರ್ಥ ಹಾಗೂ ಭಾರತೀಯ ಕಾನೂನು ವ್ಯವಸ್ಥೆ ಎಷ್ಟು ದುರ್ಬಲವಾಗಿದೆ ಎಂದು ತೋರಿದಂತಾಗುತ್ತದೆ. ಸಂತ್ರಸ್ತರಿಗೆ ಸಿಗಬೇಕಾದ ನ್ಯಾಯ ಸಿಗುತ್ತದೆ ಎಂದು ಆಶಿಸುತ್ತೇವೆ’ ಎಂದು ಟ್ವೀಟ್ ಮಾಡಲಾಗಿದೆ. ಈ ಟ್ವೀಟ್ ಅನ್ನು ನಟಿ ರಮ್ಯಾ ರೀಟ್ವೀಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!