ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಲ್ಲಿ ಬಂಧಿಸಲ್ಪಟ್ಟ ಆರ್‌ಆರ್ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಮುನಿರತ್ನ ಅವರನ್ನು ನ್ಯಾಯಾಲಯ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ.
ಮುನಿರತ್ನ ಅವರನ್ನು ಪೊಲೀಸರು ಶನಿವಾರ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿದ್ದು, ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಾಗಿತ್ತು.ಈ ಸಂದರ್ಭ ಪೊಲೀಸರು ಅವರನ್ನು ಒಂದು ವಾರ ತಮ್ಮ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರುಗೆ ಮನವಿ ಮಾಡಿದರಾದರೂ ವಿಚಾರಣೆ ನಡೆಸಿದ ನ್ಯಾಯಾಧೀಶರು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದ್ದಾರೆ.
ಇದಕ್ಕೂ ಮುನ್ನ ಪೊಲೀಸರು ಶಾಸಕ ಮುನಿರತ್ನ ಅವರನ್ನು ಅಶೋಕ್‌ನಗರ ಠಾಣೆಗೆ ಕರೆತಂದು ಮಧ್ಯರಾತ್ರಿ 12 ರಿಂದ 1.30ರವರೆಗೆ ಸತತ ಒಂದುವರೆ ಗಂಟೆಗಳ ಕಾಲ ವಿಚಾರಣೆ ನಡೆಸಿದ್ದರು.