ಹೊಸದಿಗಂತ ಡಿಜಿಟಲ್ ಡೆಸ್ಕ್:
ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಕಿ ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ತಲೆಮರೆಸಿಕೊಂಡಿದ್ದ ಬೆಂಗಳೂರಿನ ಆರ್ ಆರ್ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಕೊನೆಗೂ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದಲ್ಲಿ ವಶಕ್ಕೆ ಪಡೆಯಲಾಗಿದೆ.
ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಮುನಿರತ್ನ ಅವರ ಮೊಬೈಲ್ ಫೋನ್ ಲೊಕೇಶನ್ ಮೂಲಕ ಪತ್ತೆಯಾಗಿದೆ. ನಂತರ ಪೊಲೀಸರು ಅವರನ್ನು ವಶಕ್ಕೆ ತೆಗೆದುಕೊಂಡರು.
ಇದೀಗ ಪೊಲೀಸರು ಮುನಿರತ್ನ ಅವರನ್ನು ಬಂಧಿಸಿ ಬೆಂಗಳೂರಿಗೆ ಕರೆತರುತ್ತಿದ್ದಾರೆ.