ಜೀವ ಬೆದರಿಕೆ: ನೂಪುರ್ ಶರ್ಮಾ ಗೆ ಸಿಕ್ಕಿತು ಗನ್ ಲೈಸನ್ಸ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಬಿಜೆಪಿ ಮಾಜಿ ನಾಯಕಿ ನೂಪುರ್ ಶರ್ಮಾ ಅವರಿಗೆ ವೈಯಕ್ತಿಕ ಗನ್ ಹೊಂದಲು ಪರವಾನಗಿಯನ್ನು ದೆಹಲಿ ಪೊಲೀಸರು ನೀಡಿದ್ದಾರೆ.

ಕಳೆದ ವರ್ಷ ಟಿವಿ ಚರ್ಚೆಯೊಂದರಲ್ಲಿ ಪ್ರವಾದಿ ಮೊಹಮ್ಮದ್ ಕುರಿತು ನೂಪುರ್ ಶರ್ಮಾ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ನೂಪುರ್ ಶರ್ಮಾಗೆ ವಿದೇಶಗಳಿಂದಲೂ ಜೀವ ಬೆದರಿಕೆ ಕರೆಗಳು ಬಂದಿದ್ದವು.

ಹೀಗಾಗಿ ನೂಪುರ್ ಶರ್ಮಾ ಅವರು ಸ್ವಯಂ ರಕ್ಷಣೆಗಾಗಿ ಗನ್ ಇಟ್ಟುಕೊಳ್ಳಲು ಪರವಾನಗಿ ಬೇಕು ಎಂದು ದೆಹಲಿ ಪೊಲೀಸರ ಬಳಿ ಅರ್ಜಿ ಸಲ್ಲಿಸಿದ್ದರು. ಇದೀಗ ಈ ಅರ್ಜಿಯನ್ನು ಪರಿಶೀಲಿಸಿ ದೆಹಲಿ ಪೊಲೀಸರು ನೂಪುರ್ ಶರ್ಮಾಗೆ ಪರವಾನಗಿ ನೀಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!