ಹೊಸದಿಗಂತ ಡಿಜಿಟಲ್ ಡೆಸ್ಕ್ :
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಆಡಿಯೋ ಸಂದೇಶದಲ್ಲಿ ಖಲಿಸ್ತಾನಿ ಸಂಘಟನೆಯ ಬೆಂಬಲಿಗರು ಜೀವ ಬೆದರಿಕೆ ಹಾಕಿದ್ದು, ಈ ಹಿನ್ನೆಲೆ ಅಸ್ಸಾಂ ಪೊಲೀಸರು ಮುಖ್ಯಮಂತ್ರಿ ಬಿಸ್ವಾ ಭದ್ರತೆಯನ್ನು ಹೆಚ್ಚಳ ಮಾಡಿದ್ದಾರೆ.
ಗುರ್ಪತ್‌ವಂತ್ ಸಿಂಗ್ ಪನ್ನು ಎಂಬ ವ್ಯಕ್ತಿಯೊಬ್ಬ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಬೆದರಿಕೆ ಹಾಕುತ್ತಿರುವ ಆಡಿಯೋ ಕ್ಲಿಪ್ ನಮಗೆ ಸಿಕ್ಕಿದೆ. ಅಸ್ಸಾಂನಲ್ಲಿ ಸಿಖ್ ಸಮುದಾಯಕ್ಕೆ ಕಿರುಕುಳ ನೀಡಲಾಗುತ್ತಿದೆ. ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ್ದಾನೆ. ಈ ಸಂಬಂಧ ನಾವು ಪ್ರಕರಣ ದಾಖಲಿಸಿದ್ದೇವೆ. ತನಿಖೆ ನಡೆಸಲಾಗುವುದು ಎಂದು ಅಸ್ಸಾಂ ವಿಶೇಷ ಶಾಖೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಹಿರೇನ್ ನಾಥ್ ಮಾಹಿತಿ ನೀಡಿದ್ದಾರೆ.