ಬಿಜೆಪಿ ನಾಯಕ ಸಂಜಯ ಪಾಟೀಲ್‌ಗೆ ಜೀವ ಬೆದರಿಕೆ: ಕೈ ಕಾರ್ಯಕರ್ತರ ವಿರುದ್ಧ FIR ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಿಜೆಪಿಯ ಮಾಜಿ ಶಾಸಕ ಸಂಜಯ್ ಪಾಟೀಲ್ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ನಡೆಸಿದ ಪ್ರತಿಭಟನೆಗೆ ಸಂಬಂಧಿಸಿದಂತೆ 10 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮಾಜಿ ಶಾಸಕ ಸಂಜಯ್ ಪಾಟೀಲ್, ಕಾಂಗ್ರೆಸ್ ಕಾರ್ಯಕರ್ತರು ನನಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ್ದರು. ಹೀಗಾಗಿ ದೂರು ಆಧರಿಸಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಬೆಳಗಾವಿ ಶಹಾಪುರ‌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. 143, 149, 323, 504 ಮತ್ತು 506 ಪ್ರಕರಣಗಳು ಸೆಕ್ಷನ್ 149 ರ ಅಡಿಯಲ್ಲಿ ದಾಖಲಾಗಿವೆ. 10 ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಆಯಿಷಾ ಸನದಿ,‌ ಸುಜಯ ಜಾಧವ್, ಜಯಶ್ರೀ ಸೂರ್ಯವಂಶಿ, ಪ್ರಭಾವತಿ ಮಾಸ್ತಮರಡಿ ಸೇರಿ 10 ಜನರ ವಿರುದ್ಧ ಕೇಸ್ ದಾಖಲಾಗಿದೆ. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಗೂಂಡಾಗಳ ಮೂಲಕ ಹತ್ಯೆಗೆ ಪ್ರಚೋದನೆ ನೀಡಿದ್ದಾರೆಂದು ಸಂಜಯ್ ಪಾಟೀಲ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!