ಗುತ್ತಿಗೆದಾರನಿಗೆ ಜೀವ ಬೆದರಿಕೆ: ಮುನಿರತ್ನ ವಿರುದ್ಧ ಎರಡು ಎಫ್ಐಆರ್ ದಾಖಲು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಆರ್​.ಆರ್. ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್​ಐಆರ್​ ದಾಖಲಾಗಿವೆ.

ಜೀವ ಬೆದರಿಕೆ, ಜಾತಿ ನಿಂದನೆ ಮಾಡಿದ ಆರೋಪದಡಿಯಲ್ಲಿ ಪ್ರತ್ಯೇಕ ಎರಡು ಪ್ರಕರಣ ದಾಖಲಾಗಿವೆ. ಜೀವ ಬೆದರಿಕೆ ಪ್ರಕರಣದಲ್ಲಿ ನಾಲ್ವರು ಆರೋಪಿಗಳಿದ್ದು, ಎ1 ಶಾಸಕ ಮುನಿರತ್ನ ಆಗಿದ್ದಾರೆ. ಎ1 ಶಾಸಕ ಮುನಿರತ್ನ, ಎ2 ಆಪ್ತ ಸಹಾಯಕ ವಿಜಯ್ ಕುಮರ್, ಎ3 ಸೆಕ್ಯೂರಿಟಿ ಅಭಿಷೇಕ್ ಮತ್ತು ಎ4 ವಸಂತ್ ಕುಮಾರ್ ಆಗಿದ್ದಾರೆ.

ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಗುತ್ತಿಗೆದಾರ ಚಲುವರಾಜು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು. ಜೊತೆಗೆ ತನಗೆ ರಕ್ಷಣೆ ನೀಡುವಂತೆ ಮನವಿ ಮಾಡಿದ್ದರು.

- Advertisement - Skool Shine
Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!