ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಾಸಕ ಕೆ.ಗೋಪಾಲಯ್ಯಗೆ ಮಾಜಿ ಕಾರ್ಪೊರೇಟರ್ ಜೀವ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಇನ್ನು ಈ ಕುರಿತು ಮಾಜಿ ಕಾರ್ಪೊರೇಟರ್ ವಿರುದ್ಧ FIR ದಾಖಲು ಮಾಡಲಾಗಿತ್ತು.
ಶಾಸಕ ಕೆ.ಗೋಪಾಲಯ್ಯಗೆ ರಾತ್ರಿ 11 ಗಂಟೆಗೆ ಸುಮಾರಿಗೆ ಮಾಜಿ ಕಾರ್ಪೊರೇಟರ್ ಪದ್ಮರಾಜು ಎಂಬುವವರು ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಲ್ಲದೇ, ಶಾಸಕರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾಗಿದೆ.
ಇನ್ನು ಈ ಪ್ರಕರಣದ ಕುರಿತು ಶಾಸಕ ಈಗಾಗಲೇ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಾಜಿ ಕಾರ್ಪೊರೇಟರ್ ಪದ್ಮರಾಜು ಅವರನ್ನು ಪೊಲೀಸರು ಬಂಧಿಸಿದ್ದಾರೆ.