ಸಂಜಯ್ ರಾವತ್ ಗೆ ಜೀವ ಬೆದರಿಕೆ: ಪುಣೆಯ ಯುವಕ ಬಂಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರಂತೆ ನಿಮ್ಮನ್ನು ಹತ್ಯೆ ಮಾಡುವುದಾಗಿ ಶಿವಸೇನಾ(ಯುಬಿಟಿ) ಸಂಸದ ಸಂಜಯ್ ರಾವತ್ ಅವರಿಗೆ ಸಂದೇಶ ಕಳುಹಿಸಿದ್ದ ಆರೋಪದ ಮೇಲೆ ಪುಣೆಯ ಯುವಕನೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಮದ್ಯದ ಅಮಲಿನಲ್ಲಿ ಆತ ಬೆದರಿಕೆ ಸಂದೇಶ ಕಳುಹಿಸಿದ್ದಾನೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ. ಆದರೂ ವಿಸ್ತೃತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

ರಾವತ್ ಅವರು ಇಲ್ಲಿನ ಕಂಜುರ್ಮಾರ್ಗ್ ಪೊಲೀಸ್ ಠಾಣೆಗೆ ದೂರು ನೀಡಿದ ನಂತರ ಮುಂಬೈ ಮತ್ತು ಪುಣೆ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ 20 ವರ್ಷದ ವ್ಯಕ್ತಿಯನ್ನು ಖರಾಡಿ ಪ್ರದೇಶದಲ್ಲಿ ಬಂಧಿಸಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!