ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯ ಭಾಷೆಯಿಂದ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಅಜಿತ್ ಯಾದವ್ ಎಂಬಾತ ಇಂತಹ ಕೃತ್ಯವೆಸಗಿದ್ದು, ಇದು ಬುಧವಾರದಿಂದ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ಆಗಿತ್ತು. ಈತನ ವಿರುದ್ಧ ರುದ್ರಪುರ ಪೊಲೀಸ್ ಠಾಣೆಯಲ್ಲಿ ಸೂಕ್ತ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್ಪಿ ಸಂಕಲ್ಪ್ ಶರ್ಮ ತಿಳಿಸಿದರು. ಆರೋಪಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಇದಕ್ಕೂ ಮುನ್ನ ಅಯೋಧ್ಯೆಗೆ ಬಾಂಬ್ ಬೆದರಿಕೆ ಹಾಗೂ ಯೋಗಿ ಆದಿತ್ಯನಾಥ್ ಅವರಿಗೆ ಜೀವಬೆದರಿಕೆ ಒಡ್ಡಿದ್ದ ಆರೋಪಿಗಳಾದ ಗೋಂಡಾದ ತಾಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಅವರನ್ನು ಬಂಧಿಸಲಾಗಿದೆ ಎಂದು ಎಸ್‌ಟಿಎಫ್‌ನ ಎಡಿಜಿಪಿ ಅಮಿತಾಬ್ ಯಶ್ ತಿಳಿಸಿದ್ದರು.