Thursday, October 6, 2022

Latest Posts

ಅಹಮದಾಬಾದ್‌ನಲ್ಲಿ ಲಿಫ್ಟ್ ಕುಸಿದು ಏಳು ಕಾರ್ಮಿಕರ ಸಾವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಹಮದಾಬಾದ್‌ನಲ್ಲಿ ಕಟ್ಟಡದ ಲಿಫ್ಟ್ ಕುಸಿದು ಏಳು ಕಾರ್ಮಿಕರು ಮೃತಪಟ್ಟಿದ್ದಾರೆ.
ಗುಜರಾತ್ ವಿವಿ ಬಳಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಲಿಫ್ಟ್ ಕುಸಿದಿದ್ದು, ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ. ಏಳನೇ ಮಹಡಿಯಿಂದ ಲಿಫ್ಟ್ ಕುಸಿದಿದ್ದು ಸ್ಥಳದಲ್ಲೇ ಆರು ಮಂದಿ ಮೃತಪಟ್ಟಿದ್ದಾರೆ. ಇನ್ನೊಬ್ಬರು ಆಸ್ಪತ್ರೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇಬ್ಬರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!