ಮಹಾರಾಷ್ಟ್ರದಲ್ಲಿ ಲಿಫ್ಟ್‌ ಕುಸಿತ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಲಿಫ್ಟ್ ಕುಸಿದು 7 ಮಂದಿ ಕಾರ್ಮಿಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಭಾನುವಾರ ನಡೆದಿದೆ.

ಥಾಣೆಯಲ್ಲಿನ ಹೈಲ್ಯಾಂಡ್ ಪಾರ್ಕ್​ನಲ್ಲಿನ ನಾರಾಯಣಿ ಶಾಲೆಯ ಪಕ್ಕದಲ್ಲಿರುವ ರನ್ವಾಲ್ ಗಾರ್ಡನ್‌ನಲ್ಲಿ ಈ ದುರಂತ ಸಂಭವಿಸಿದೆ.

40 ಅಂತಸ್ತಿನ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿತ್ತು. ಭಾನುವಾರ ಸಂಜೆ ಕಾರ್ಮಿಕರು ನೀರು ಹರಿಸಿ ಮೇಲಿನ ಅಂತಸ್ತಿನಿಂದ ಕೆಳಕ್ಕೆ ಲಿಫ್ಟ್​ನಲ್ಲಿ ಬರುತ್ತಿರುವ ವೇಳೆ ಈ ಅವಘಡ ಸಂಭವಿಸಿದೆ. ಲಿಫ್ಟ್ ಇದ್ದಕ್ಕಿದ್ದಂತೆ ಕುಸಿದಿದೆ. ಇದರಿಂದ ಸ್ಥಳದಲ್ಲೇ 6 ಮಂದಿ ಸಾವಿಗೀಡಾಗಿದ್ದಾರೆ. ಉಳಿದ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿತ್ತು ಗಾಯಾಳುಗಳ ಪೈಕಿ ಓರ್ವ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ. ಈ ಮೂಲಕ ಸಾವಿನ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!