ಏಕಾಏಕಿ ಕುಸಿದು ಬಿತ್ತು ಲಿಫ್ಟ್, ಸ್ಥಳದಲ್ಲೇ ಮೂವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ತಂತಿ ತುಂಡಾಗಿ ಲಿಫ್ಟ್ ಕುಸಿದು ಬಿದ್ದ ದಾರುಣ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಎಂಟು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಎನ್ಟಿಆರ್ ಜಿಲ್ಲೆಯ ಇಬ್ರಾಹಿಂಪಟ್ಟಣ ವಿಟಿಪಿಎಸ್‌ನಲ್ಲಿ ನಡೆದಿದೆ.

ಎಂಟು ಮಂದಿ ಲಿಫ್ಟ್‌ನಲ್ಲಿ ಹೋಗುತ್ತಿದ್ದಾಗ ತಂತಿ ತುಂಡಾಗಿ ಲಿಫ್ಟ್‌ನ ಕೆಳಗೆ ಬಿದ್ದಿದೆ. ಪರಿಣಾಮ ಲಿಫ್ಟ್ ನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಇತರ 8 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!