Thursday, October 6, 2022

Latest Posts

ಇಂದೇ ರಿಲೀಸ್….ಒಟಿಟಿ ಪ್ಲಾಟ್‌ಫಾರ್ಮ್ ಕೂಡ ಲಾಕ್!!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ರೌಡಿ ಸ್ಟಾರ್ ವಿಜಯ್ ದೇವರಕೊಂಡ ಅಭಿನಯದ ಚಿತ್ರ ‘ಲೈಗರ್’ ಭಾರೀ ನಿರೀಕ್ಷೆಗಳ ನಡುವೆ ಇಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ.  ಪೂರಿ ಜಗನ್ನಾಥ್ ನಿರ್ದೇಶನದ ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾವಾಗಿ ತೆರೆಗೆ ಬಂದಿರುವುದು ರೌಡಿ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ. ಈ ಸಿನಿಮಾವನ್ನು ಥಿಯೇಟರ್ ಗೆ ಹೋಗಿ ನೋಡಲು ತಯಾರಾಗುತ್ತಿರುವ ಪ್ರೇಕ್ಷಕರಿಗೆ ಮತ್ತೊಂದು ಗುಡ್ ನ್ಯೂಸ್ ಕೂಡ ನೀಡಿದ್ದಾರೆ ಲೈಗರ್.

ಬೃಹತ್ ಬಜೆಟ್‌ನಲ್ಲಿ ನಿರ್ಮಿಸಲಾದ ಈ ಚಿತ್ರದ ಡಿಜಿಟಲ್ ಹಕ್ಕುಗಳನ್ನು ಜನಪ್ರಿಯ OTT ಪ್ಲಾಟ್‌ಫಾರ್ಮ್ ʻಡಿಸ್ನಿಪ್ಲಸ್ ಹಾಟ್‌ಸ್ಟಾರ್ʼ ಭಾರಿ ದರದಲ್ಲಿ ಪಡೆದುಕೊಂಡಿದೆ. ಮಾಸ್ ಎಂಟರ್‌ಟೈನರ್ ಆಗಿ ತಯಾರಾಗಿರುವ ಈ ಚಿತ್ರದ ಮೂಲಕ ವಿಜಯ್ ದೇವರಕೊಂಡ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿ ತಮ್ಮ ಸಾಮರ್ಥ್ಯವನ್ನು ತೋರಿಸುವುದು ಖಚಿತ ಎಂದು ಚಿತ್ರದ ಮೂಲಗಳು ಹೇಳುತ್ತವೆ. ಮೊದಲ ದಿನವೇ ಈ ಚಿತ್ರ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ರೆಸ್ಪಾನ್ಸ್ ಪಡೆಯಲಿದೆ ಎಂದು ಎಲ್ಲರೂ ಹಾರೈಸಿದ್ದಾರೆ.

ವಿಜಯ್ ದೇವರಕೊಂಡ ಫೈಟರ್ ಪಾತ್ರದಲ್ಲಿ ನಟಿಸುತ್ತಿದ್ದರೆ, ಬಾಲಿವುಡ್ ಬೆಡಗಿ ಅನನ್ಯಾ ಪಾಂಡೆ ನಾಯಕಿಯಾಗಿ ನಟಿಸಿದ್ದರೆ, ರಮ್ಯಾ ಕೃಷ್ಣ ಮತ್ತು ಮೈಕ್ ಟೈಸನ್ ಇತರ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಈ ಸಿನಿಮಾ ಅದ್ಧೂರಿ ಬಜೆಟ್‌ನಲ್ಲಿ ನಿರ್ಮಾಣವಾಗಿರುವುದರಿಂದ ಬಾಕ್ಸ್ ಆಫೀಸ್‌ನಲ್ಲಿ ಈ ಸಿನಿಮಾ ಯಾವ ರೀತಿ ಕಲೆಕ್ಷನ್ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!