Wednesday, March 29, 2023

Latest Posts

ವಿಜಯಪುರ ಜಿಲ್ಲೆಯ ಗಡಿ ಭಾಗದಲ್ಲಿ ಲಘು ಭೂಕಂಪನ, ಭೀತಿಗೊಂಡ ಜನ

ಹೊಸದಿಗಂತ ವರದಿ ವಿಜಯಪುರ:

ಜಿಲ್ಲೆಯ ಗಡಿ ಭಾಗ ಸೇರಿದಂತೆ ಮಹಾರಾಷ್ಟ್ರದ ಕೆಲ ಗ್ರಾಮಗಳಲ್ಲಿ ಗುರುವಾರ ರಾತ್ರಿ ಎರಡು ಬಾರಿ ಲಘು ಭೂಕಂಪನದ ಅನುಭವಕ್ಕೆ ಗ್ರಾಮಸ್ಥರು ಭೀತಿಗೊಳ್ಳುವಂತಾಗಿದೆ.

ಜಿಲ್ಲೆಯ ತಿಕೋಟಾ ತಾಲೂಕಿನ ಕಳ್ಳಕವಟಗಿ, ಹುಬನೂರ, ಘೋಣಸಗಿ, ಟಕ್ಕಳಕಿ, ಸೋಮದೇವರಹಟ್ಟಿ, ಸಿದ್ದಾಪುರ ಕೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳು ಹಾಗೂ ಮಹಾರಾಷ್ಟ್ರದ ಬಿವರಗಿ, ಮೊರಬಗಿ ಗ್ರಾಮದ ಸುತ್ತಮುತ್ತ ಗುರುವಾರ ರಾತ್ರಿ 10.05 ಗಂಟೆಗೆ ಹಾಗೂ ಮಧ್ಯರಾತ್ರಿ 1.47 ಕ್ಕೆ ಲಘು ಭೂಕಂಪನವಾಗಿದೆ. ಇನ್ನು ಮಧ್ಯರಾತ್ರಿ 1.47ಕ್ಕೆ ಆದ ಲಘು ಭೂಕಂಪನ ರಿಕ್ಟರ್ ಮಾಪಕದಲ್ಲಿ 2.7 ರಷ್ಟು ದಾಖಲಾಗಿದೆ. ಭೂಕಂಪನದ ಕೇಂದ್ರ ಬಿಂದು ಮಹಾರಾಷ್ಟ್ರದ ಸಾಂಗ್ಲಿ ಜಿಲ್ಲೆಯ ಬಿವರಗಿಯಾಗಿದೆ.

ಕಳೆದೆರಡು ವರ್ಷಗಳಿಂದ ಜಿಲ್ಲೆಯಲ್ಲಿ ಆಗಾಗ ಲಘು ಭೂಕಂಪನ ಸಂಭವಿಸುತ್ತಿದ್ದು, ಜನರು ಆತಂಕಗೊಳ್ಳುವಂತಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!