October 1, 2026
Thursday, October 1, 2026
spot_img

WEATHER | ಮಂದವಾದ ಮುಂಗಾರು ಮಳೆ ಮುಂದುವರಿಕೆ : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಮಂದವಾದ ಮುಂಗಾರು ಮಳೆ ಮುಂದುವರಿದಿದ್ದು, ಇಂದು ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಮಳೆ ಹಾಗೂ ಮಳೆ ಇಲ್ಲದೆಯೂ 30ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಎಲ್ಲೆಲ್ಲಿ ಹಗುರ ಮಳೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ ಹಾಗೂ ಕೊಪ್ಪಳದಲ್ಲಿ ಸಾಧಾರಣ ಮಳೆ ಹಾಗೂ ಗಾಳಿ ಬೀಸಲಿದೆ.

ದಕ್ಷಿಣ ಒಳನಾಡಿನಲ್ಲಿ ಅನಗತ್ಯ ಪ್ರಯಾಣ ಬೇಡ

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಎಲ್ಲೂ ಅನಗತ್ಯ ಪ್ರಯಾಣ ಬೇಡ ಎಂದು ಸೂಚನೆ ನೀಡಲಾಗಿದೆ.

Must Read