ಹೊಸದಿಗಂತ ಡಿಜಿಟಲ್ ಡೆಸ್ಕ್:
ಮುಂಬೈ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತಿದ್ದ ಲಘು ವಿಮಾನವೊಂದು ರನ್‌ವೇನಲ್ಲಿ ಹಾದಿ ತಪ್ಪಿ ಅಪಘಾತಕ್ಕೀಡಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಅಪಘಾತಕ್ಕೀಡಾದ ಖಾಸಗಿ ಜೆಟ್ VT-DBL ವಿಮಾನವು ವಿಶಾಖಪಟ್ಟಣಂನಿಂದ ಬಂದಿತ್ತು.ಇದರಲ್ಲಿ 6 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿಯಿದ್ದರು.
ಸದ್ಯ ವಿಮಾನ ನಿಲ್ದಾಣದಲ್ಲಿ ತುರ್ತು ಕಾರ್ಯಾಚರಣೆ ಆರಂಭಿಸಲಾಗಿದೆ. ಇದರಿಂದಾಗಿ ಇತರ ವಿಮಾನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.
ಖಾಸಗಿ ಜೆಟ್ ವಿಮಾನ VT-DBL ಲ್ಯಾಂಡಿಂಗ್ ವೇಳೆ ರನ್‌ವೇನಿಂದ ಹೊರಕ್ಕೆ ಜಾರಿದ ಪರಿಣಾಮ ಅಪಘಾತವಾಗಿದೆ ಎಂದು ವಿಪತ್ತು ನಿರ್ವಹಣಾ ಘಟಕ ತಿಳಿಸಿದೆ.ಬಿರುಗಾಳಿ ಸಹಿತ ಮಳೆಯಿಂದಾಗಿ ರನ್‌ವೇ ಸ್ಪಷ್ಟವಾಗಿ ಕಾಣಿಸದ ಪರಿಣಾಮ ದುರಂತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ.