ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿಲಿಕಾನ್ ಸಿಟಿಯಲ್ಲಿ ಮೋಡ ಕವಿದ ವಾತಾವರಣವಿದ್ದು, ಕೆಲವೆಡೆ ತುಂತುರು ಮಳೆ ಆರಂಭವಾಗಿದೆ. ಮುಂದಿನ ಮೂರು ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ.
ಹವಮಾನ ಇಲಾಖೆ ಏ.17ರವರೆಗೆ ಮಳೆಯ ಮುನ್ಸೂಚನೆ ನೀಡಿದ್ದು, ಧಾರವಾಡ, ಗದಗ, ಬೆಂಗಳೂರು ನಗರ, ತುಮಕೂರು, ಚಿತ್ರದುರ್ಗ, ಕೋಲಾರ, ತುಮಕೂರು, ಬೆಳಗಾವಿ, ಚಾಮರಾಜನಗರ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ