October 9, 2026
Friday, October 9, 2026
spot_img

ಸಿಡಿಲಬ್ಬರದ ಬ್ಯಾಟಿಂಗ್: ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಕೇವಲ 15 ವರ್ಷದ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಶನಿವಾರ ನಡೆದ ಗುಜರಾತ್ ಟೈಟನ್ಸ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಬೌಲಿಂಗ್‌ಗೆ ಸಿಕ್ಸರ್ ಬಾರಿಸುವ ಮೂಲಕ ಜಾಗತಿಕ ಟಿ20 ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ರಾಜಸ್ಥಾನ್ ರಾಯಲ್ಸ್ ತಂಡದ ಪರ ಆಡುತ್ತಿರುವ ವೈಭವ್ ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಡಿಮೆ ಎಸೆತಗಳನ್ನು ಎದುರಿಸಿ 100 ಸಿಕ್ಸರ್‌ಗಳನ್ನು ಪೂರೈಸಿದ ವಿಶ್ವದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅವರು ಕೇವಲ 514 ಎಸೆತಗಳಲ್ಲಿ ಈ ಮೈಲಿಗಲ್ಲು ತಲುಪಿದ್ದಾರೆ.

ಪ್ರಸಕ್ತ ಐಪಿಎಲ್ 2026ರ ಸೀಸನ್‌ನಲ್ಲಿ ಪವರ್‌ಪ್ಲೇ ಅವಧಿಯಲ್ಲೇ ಭರ್ಜರಿ 30 ಸಿಕ್ಸರ್‌ಗಳನ್ನು ಸಿಡಿಸುವ ಮೂಲಕ ಅಭಿಷೇಕ್ ಶರ್ಮಾ ಹೆಸರಲ್ಲಿದ್ದ ಸಾರ್ವಕಾಲಿಕ ಐಪಿಎಲ್ ದಾಖಲೆಯನ್ನು ಸೂರ್ಯವಂಶಿ ಮುರಿದಿದ್ದಾರೆ. ಐಪಿಎಲ್ ಇತಿಹಾಸದಲ್ಲಿ 40ಕ್ಕಿಂತ ಕಡಿಮೆ ಎಸೆತಗಳಲ್ಲಿ ಎರಡು ಶತಕ ಸಿಡಿಸಿದ ಏಕೈಕ ಬ್ಯಾಟರ್ ಇವರಾಗಿದ್ದಾರೆ.

Must Read