ಪಶ್ಚಿಮ ಬಂಗಾಳದಲ್ಲಿ ಭೀಕರ ಸಿಡಿಲಿಗೆ 14 ಮಂದಿ ಬಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಸಿಡಿಲು ಬಡಿದು 14 ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ. ಗುರುವಾರ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಪುರ್ಬಾ ಬರ್ದಮಾನ್ ಜಿಲ್ಲೆಯಲ್ಲಿ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿದ್ದಾರೆ.

ಮುರ್ಷಿದಾಬಾದ್ ಜಿಲ್ಲೆಯಲ್ಲಿ ಎರಡು ಮತ್ತು ಉತ್ತರದಲ್ಲಿ 24 ಪರಗಣ ಜಿಲ್ಲೆಗಳಲ್ಲಿ ಇನ್ನಿಬ್ಬರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಶ್ಚಿಮ ಮಿಡ್ನಾಪುರ ಜಿಲ್ಲೆಯಲ್ಲಿ ಮೂವರು ಮತ್ತು ಹೌರಾ ಗ್ರಾಮಾಂತರ ಜಿಲ್ಲೆಯಲ್ಲಿ ಇನ್ನೂ ಮೂವರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ಇನ್ನೊಂದು ಪ್ರಮುಖ ವಿಷಯವೆಂದರೆ ಇಲ್ಲಿ ಸಿಡಿಲು ಬಡಿದು ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ರೈತರಾಗಿದ್ದಾರೆ. ಇವರೆಲ್ಲರೂ ತಮ್ಮ ಜಮೀನುಗಳಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಕೆಲ ಜಿಲ್ಲೆಗಳಲ್ಲಿ ಗುರುವಾರ ಸಂಜೆ ಗುಡುಗು ಮಿಂಚು ಸಹಿತ ಮಳೆಯಾಗಿದೆ ಎಂದು ವಿವರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!