ಒಡಿಶಾದಲ್ಲಿ ಅಬ್ಬರಿಸಿದ ಸಿಡಿಲು, ಎರಡೇ ದಿನದಲ್ಲಿ 15 ಮಂದಿ ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಒಡಿಶಾದ ಐದು ಜಿಲ್ಲೆಗಳಲ್ಲಿ ಭಾನುವಾರ ಸಿಡಿಲು ಬಡಿದು 6 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ 2 ದಿನದಲ್ಲಿ ಸಿಡಿಲಿನಿಂದ ಬಲಿಯಾದವರ ಸಂಖ್ಯೆ 15ಕ್ಕೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶನಿವಾರ ರಾಜ್ಯದ ವಿವಿಧ ಭಾಗಗಳಲ್ಲಿ 9 ಮಂದಿ ಸಾವನ್ನಪ್ಪಿದ್ದರು. ಸರ್ಕಾರದ ಅಂಕಿ ಅಂಶಗಳ ಪ್ರಕಾರ ಕೇಂದ್ರಪಾರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳು ಸಾವನ್ನಪ್ಪಿದ್ದರೆ, ಬಾಲಸೋರ್, ಭದ್ರಕ್, ಜಾಜ್‍ಪುರ ಮತ್ತು ಸುವರ್ಣಪುರದಲ್ಲಿ ಸಿಡಿಲು ಬಡಿದು ತಲಾ ಒಬ್ಬರು ಬಲಿಯಾಗಿದ್ದಾರೆ. ಅಲ್ಲದೇ ಹಲವರು ಗಾಯಗೊಂಡಿದ್ದಾರೆ.

ಸಿಡಿಲಿನಿಂದ ಮೃತಪಟ್ಟವರ ಕುಟುಂಬಗಳಿಗೆ ತಲಾ 4 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ. ಅಲ್ಲದೇ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ.

Advertisement
- Advertisement - Skool Shine Skool Shine

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!