ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿದ್ದು, ಇದರ ಬೆನ್ನಲ್ಲೇ, ಕಾಂಗ್ರೆಸ್ ಮಾಜಿ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಅವರು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ನಂತೆ ಪ್ರತಿಪಕ್ಷಗಳನ್ನೂ ರಾಹುಲ್ ಗಾಂಧಿ ನಿರ್ನಾಮ ಮಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.
ರಾಹುಲ್ ಗಾಂಧಿ ಅವರು ಕಾಂಗ್ರೆಸ್ಅನ್ನು ಮುಗಿಸಲು 15 ವರ್ಷ ತೆಗೆದುಕೊಂಡರು. ಇನ್ನು, ರಾಹುಲ್ ಗಾಂಧಿ ಅವರು ಪ್ರತಿಪಕ್ಷಗಳನ್ನು 15 ತಿಂಗಳೊಳಗೇ ಮುಗಿಸಲಿದ್ದಾರೆ ಎಂದು ಹೇಳಿದರು.
ಸಂಸತ್ನಲ್ಲಿ ಪ್ರಮಾಣವಚನ ಸ್ವೀಕರಿಸುವ ವೇಳೆ ಜೈ ಪ್ಯಾಲೆಸ್ತೀನ್ ಎಂದು ಅಸಾದುದ್ದೀನ್ ಓವೈಸಿ ಘೋಷಣೆ ಕೂಗಿದ ಕುರಿತು ಪ್ರತಿಕ್ರಿಯಿಸಿದ ಅವರು, ‘ಇದು ಭಾರತ ಸಂಸತ್ತು. ಭಾರತದ ಸಂಸತ್ನಲ್ಲಿ ಹಾಗೆ ಘೋಷಣೆ ಕೂಗುವುದು ಸರಿಯಲ್ಲ. ಅವರು ಕೂಡಲೇ ಕ್ಷಮೆಯಾಚಿಸಬೇಕು’ ಎಂದು ಒತ್ತಾಯಿಸಿದರು.
ಆಚಾರ್ಯ ಪ್ರಮೋದ್ ಕೃಷ್ಣಂ ಅವರು ಕಾಂಗ್ರೆಸ್ ನಾಯಕರೂ ಆಗಿದ್ದರು. ಕಲ್ಕಿ ಧಾಮದ ಪೀಠಾಧೀಶರೂ ಆಗಿರುವ ಇವರನ್ನು ಕೆಲವು ತಿಂಗಳ ಹಿಂದಷ್ಟೇ ಕಾಂಗ್ರೆಸ್ ಉಚ್ಚಾಟನೆ ಮಾಡಿದೆ.