Thursday, October 2, 2025

ನೇಪಾಳದಂತೆ ಫ್ರಾನ್ಸ್‌ನಲ್ಲೂ ಕಟ್ಟೆಯೊಡೆದ ಜನಾಕ್ರೋಶ: 200 ಮಂದಿ ಅರೆಸ್ಟ್‌

ಹೊಸದಿಗಂತ ಡಿಜಿಟಲ್ ಡೆಸ್ಕ್:

ನೇಪಾಳದ ಬಳಿಕ ಇದೀಗ ಫ್ರಾನ್ಸ್‌ನಲ್ಲಿ ಸರ್ಕಾರದ ವಿರುದ್ಧ ಜನರ ಅಸಮಾಧಾನ ಸ್ಫೋಟಗೊಂಡಿದೆ. ಎಮ್ಯಾನುಯೆಲ್ ಮ್ಯಾಕ್ರನ್ ಸರ್ಕಾರದ ಆರ್ಥಿಕ ನೀತಿಗಳನ್ನು ವಿರೋಧಿಸಿ ಸಾವಿರಾರು ಜನರು ಬೀಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಜನಜೀವನ ಮಟ್ಟ ಸುಧಾರಿಸುವಲ್ಲಿ ಸರ್ಕಾರ ವಿಫಲವಾಗಿದೆ, ಹಣಕಾಸು ನಿರ್ವಹಣೆ ಕಳಪೆಯಾಗಿರುವುದರಿಂದಲೇ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ರಾಜಧಾನಿ ಪ್ಯಾರಿಸ್‌ನಲ್ಲಿ ನಡೆದ ಪ್ರತಿಭಟನೆ ಹಿಂಸಾತ್ಮಕ ತಿರುವು ಪಡೆದಿದೆ. ಪ್ರತಿಭಟನಾಕಾರರು ರಸ್ತೆ ತಡೆದು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿದ್ದಂತೆ ಪೊಲೀಸರು ಬಲಪ್ರಯೋಗ ನಡೆಸಿ ಸುಮಾರು 200 ಮಂದಿಯನ್ನು ಬಂಧಿಸಿರುವುದಾಗಿ ಫ್ರಾನ್ಸ್‌ನ ಗೃಹ ಸಚಿವರು ತಿಳಿಸಿದ್ದಾರೆ.

ಪರಿಸ್ಥಿತಿಯನ್ನು ಹತ್ತಿಕ್ಕಲು ಸಾವಿರಾರು ಪೊಲೀಸರನ್ನು ನಿಯೋಜಿಸಿದರೂ ಹಲವೆಡೆ ಘರ್ಷಣೆಗಳು ಸಂಭವಿಸಿವೆ. ಪ್ಯಾರಿಸ್‌ನ ಪ್ರಮುಖ ರಸ್ತೆಗಳಲ್ಲಿ ಸಾರಿಗೆ ಅಸ್ತವ್ಯಸ್ತಗೊಂಡಿದ್ದು, ವ್ಯಾಪಾರ ಹಾಗೂ ದಿನನಿತ್ಯದ ಚಟುವಟಿಕೆಗಳಿಗೂ ದೊಡ್ಡ ತೊಂದರೆ ಉಂಟಾಗಿದೆ.