ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿಯಂತೆ ಸುಳ್ಳು ಭರವಸೆಗಳನ್ನು ನೀಡಿದ್ದಾರೆ ಎಂದು ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಟೀಕಿಸಿದರು.
ಸೀಲಾಂಪುರಲ್ಲಿ ತಮ್ಮ ಪಕ್ಷದ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅವರು ಈ ಮಾತು ಹೇಳಿದರು, ಅರವಿಂದ್ ಕೇಜ್ರಿವಾಲ್ ದೆಹಲಿಯನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸಿದ್ದಾರೆಯೇ? ಪ್ರಧಾನಿ ಮೋದಿಯವರಂತೆ ಅರವಿಂದ್ ಕೇಜ್ರಿವಾಲ್ ಪ್ರಚಾರ ಮಾಡಿ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಿದ್ದಾರೆ ಎಂದರು.
ಶೀಲಾ ದೀಕ್ಷಿತ್ ಅವರು ರಾಷ್ಟ್ರ ರಾಜಧಾನಿಯ ಮುಖ್ಯಮಂತ್ರಿಯಾಗಿದ್ದಾಗ ದೆಹಲಿ ಸ್ವಚ್ಛವಾಗಿತ್ತು. ದೆಹಲಿಗಾಗಿ ಶೀಲಾ ದೀಕ್ಷಿತ್ ಮಾಡಿದ್ದನ್ನು ಬೇರೆ ಯಾವ ಮುಖ್ಯಮಂತ್ರಿಯೂ ಸರಿಗಟ್ಟಲು ಸಾಧ್ಯವಿಲ್ಲ ಎಂದು ಹೇಳಿದರು.