Wednesday, February 28, 2024

ಲೀಲಾವತಿ ಅವರ ಇಷ್ಟದಂತೆಯೇ ಸೋಲದೇವನಹಳ್ಳಿಯಲ್ಲಿ ಅಂತ್ಯಕ್ರಿಯೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕನ್ನಡದ ಹಿರಿಯ ನಟಿ ಲೀಲಾವತಿ ನಿನ್ನೆ ಸಂಜೆ ಕೊನೆಯುಸಿರೆಳೆದಿದ್ದಾರೆ. ಅವರ ನೆಚ್ಚಿನ ಸೋಲದೇವನಹಳ್ಳಿಯ ತೋಟದಲ್ಲಿಯೇ ಅಂತ್ಯಕ್ರಿಯೆ ಮಾಡುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ನೆಲಮಂಗಳದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಿಎಂ ಹಾಗೂ ಇನ್ನಿತರ ಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದ ಬಳಿಕ ಸೋಲದೇವನಹಳ್ಳಿಯಲ್ಲಿ ಅಂತಿಮ ಕ್ರಿಯೆ ನಡೆಸಲಾಗುತ್ತದೆ.

ಬೆಳಗ್ಗೆ 9:30ರವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಬೆಳಗ್ಗೆ 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅಂತಿಮ ದರ್ಶನ ಪಡೆದು ಗೌರವ ಸಲ್ಲಿಸಲಿದ್ದಾರೆ.

ಫಾರ್ಮ್‌ಹೌಸ್‌ನಲ್ಲಿ ಹಿಂದೂ ಸಂಪ್ರದಾಯದಂತೆ ಅಂತ್ಯಕ್ರಿಯೆಗೆ ತಯಾರಿ ಮಾಡಲಾಗಿದೆ. ಲೀಲಾವತಿ ಅವರ ಅಂತಿಮ ದರ್ಶನದ ಭದ್ರತೆಗೆ 500 ಪೊಲೀಸರ ನಿಯೋಜನೆ ಮಾಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!