March 9, 2026
Monday, March 9, 2026
spot_img

ಲೈನ್ ಕ್ಲಿಯರೆನ್ಸ್ ಎಡವಟ್ಟು: ವಿದ್ಯುತ್ ಶಾಕ್​ಗೆ ಯುವ ಲೈನ್​ಮ್ಯಾನ್ ಸಾ*ವು

ಹೊಸದಿಗಂತ ಡಿಜಿಟಲ್ ಡೆಸ್ಕ್:

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಚೌಡ್ಲಾಪುರ ಗ್ರಾಮದಲ್ಲಿ ವಿದ್ಯುತ್ ಪರಿವರ್ತಕ (TC) ಅಳವಡಿಸುವಾಗ ಕೆ.ಪಿ. ಮನು (26) ಎಂಬ ಲೈನ್​​ಮ್ಯಾನ್​​ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ.

ಅಧಿಕಾರಿಗಳು ಸರಿಯಾದ ಲೈನ್ ಕ್ಲಿಯರೆನ್ಸ್ ನೀಡದೆ ಕೆಲಸಕ್ಕೆ ನಿಯೋಜಿಸಿದ್ದೇ ಈ ಸಾವಿಗೆ ನೇರ ಕಾರಣ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಮೃತ ಮನು ಅವರ ಪತ್ನಿ 9 ತಿಂಗಳ ಗರ್ಭಿಣಿಯಾಗಿದ್ದು, ಕುಟುಂಬದ ಆಧಾರಸ್ತಂಭವನ್ನು ಕಳೆದುಕೊಂಡು ಬೀದಿಗೆ ಬಿದ್ದಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಲಾಗಿದ್ದು, ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !